ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

ತುಮಕೂರು : ಪಶುಸಂಗೋಪನಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಪತ್ತಿನ ಸಂರಕ್ಷಣೆ ಹಾಗೂ ರೈತರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದುಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.ತುಮಕೂರು ನಗರದ ಕಲ್ಟೆಕ್ಸ್ ಸರ್ಕಲ್ ಸಮೀಪದ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಸಂಗೋಪನಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಇಲಾಖೆಯ ಆಡಳಿತ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, 50 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿಗೆ ಚಾಲನೆ, ಬೆಳ್ಳಾವಿ ಮತ್ತು ಅರಕೆರೆಯಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಪಶು ಆಸ್ಪತ್ರೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಿರೇಗುಂಡಕಲ್ನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ ಎಂದರು.ಪಶುಸಂಗೋಪನೆ ನಮ್ಮ ಗ್ರಾಮೀಣ ಆರ್ಥಿಕತೆಯ ಪ್ರಮುಖ ಭಾಗವಾಗಿದೆ. ಮನುಷ್ಯನ ಬದುಕಿನೊಂದಿಗೆ ಪ್ರಾಣಿಗಳ ಬದುಕು ಬೆಸೆದುಕೊಂಡಿದ್ದು, ಅವುಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ತುಮಕೂರು ಜಿಲ್ಲೆಯಲ್ಲಿ ಹಸು, ಎಮ್ಮೆ ಸೇರಿದಂತೆ ಸುಮಾರು 5 ಲಕ್ಷ ಜಾನುವಾರುಗಳಿದ್ದು, 17 ಲಕ್ಷ ಕುರಿ ಮತ್ತು ಮೇಕೆಗಳಿವೆ. ವಿಶೇಷವಾಗಿ ಶಿರಾ, ಪಾವಗಡ, ಮಧುಗಿರಿ ಹಾಗೂ ಚಿಕ್ಕನಾಯಕನಹಳ್ಳಿ ತಾಲ್ಲೂಕುಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಹೆಚ್ಚಾಗಿದೆ. ಕುರಿ ಸಾಕಾಣಿಕೆಯಲ್ಲಿ ತೊಡಗಿದ್ದ ಬಡ್ಡಿ ಈರಣ್ಣ ಎಂಬುವವರು ಒಬ್ಬರೇ ಸುಮಾರು 5 ಸಾವಿರ ಕುರಿಗಳನ್ನು ಸಾಕುತ್ತಿದ್ದರು. ಪಶುಸಂಗೋಪನೆಯು ರೈತರ ಜೀವನೋಪಾಯಕ್ಕೆ ನೆರವಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಪೂರಕವಾಗಿದೆ. ಕೃಷಿ ಮತ್ತು ಪಶುಸಂಗೋಪನೆ ಪರಸ್ಪರ ಅವಲಂಬಿತವಾಗಿವೆ ಎಂದು ತಿಳಿಸಿದರು.ಪ್ರಸ್ತುತ ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಮಧುಗಿರಿ, ಪಾವಗಡ ಮತ್ತು ಶಿರಾ ಭಾಗದ ಬಹುತೇಕ ಕೆರೆಗಳು ಒಣಗಿವೆ. ಇಂತಹ ಸಂದರ್ಭದಲ್ಲಿ ಜಾನುವಾರುಗಳಿಗೆ ಅಗತ್ಯ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸುವ ಮೂಲಕ ಪಶುಸಂಪತ್ತನ್ನು ಉಳಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಮೇವು ಖರೀದಿಗೆ ಹೆಚ್ಚಿನ ಹಣ ವ್ಯಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಶುಸಂಗೋಪನೆಯಲ್ಲಿ ತೊಡಗಿರುವವರಿಗೆ ಅಗತ್ಯ ನೆರವು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ತುಮಕೂರು ಜಿಲ್ಲೆಯಲ್ಲಿ ಈಗಾಗಲೇ 120 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಹೆಚ್ಚುವರಿಯಾಗಿ 400 ಫಲಾನುಭವಿಗಳನ್ನು ಆಯ್ಕೆ ಮಾಡಿ ಸಹಾಯಧನ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ಯೋಜನೆಗಳಡಿ ₹11.70 ಕೋಟಿ ಅನುದಾನ ಮಂಜೂರಾಗಿದ್ದು, ಪಶುವೈದ್ಯಕೀಯ ಸಂಸ್ಥೆಗಳ ಬಲವರ್ಧನೆಗೆ ₹11 ಕೋಟಿ ಬಿಡುಗಡೆ ಮಾಡಲಾಗಿದೆ. ಅನುಗ್ರಹ ಯೋಜನೆಯಡಿ ₹17 ಕೋಟಿ ಮಂಜೂರಾಗಿದ್ದು, ಈ ಪೈಕಿ ₹11 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಜನರ ಜೀವನೋಪಾಯ, ಕೃಷಿ ಚಟುವಟಿಕೆ ಹಾಗೂ ಗ್ರಾಮೀಣ ಆರ್ಥಿಕತೆಯ ದೃಷ್ಟಿಯಿಂದ ಪಶುಸಂಗೋಪನಾ ಇಲಾಖೆ ಅತ್ಯಂತ ಮಹತ್ವದ್ದಾಗಿದೆ. ಈ ಇಲಾಖೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಸುದ್ದಿಗಳು

ಯುವಜನತೆ ಇತಿಹಾಸ ಪ್ರಸಿದ್ಧ ಸ್ಥಳಗಳ ಸಂದರ್ಶನ, ಅಧ್ಯಯನ ಮಾಡಬೇಕು : ಸುರೇಶ್. ಎನ್. ಋಗ್ವೇದಿ
ಚಾಮರಾಜನಗರ : ಭಾರತದಲ್ಲಿರುವ ಧಾರ್ಮಿಕ ಕೇಂದ್ರಗಳು, ಇತಿಹಾಸ ಪ್ರಸಿದ್ಧ ಸ್ಥಳಗಳ ಸಂದರ್ಶನ ಮತ್ತು ಅಧ್ಯಯನವನ್ನು ಯುವಕರು ಮತ್ತು ವಿದ್…
◷ 25/11/2026
ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ : ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕರೆ
ಬಳ್ಳಾರಿ : ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯಾವುದಾದರೂ ಒಂದು…
◷ 25/11/2026
‘ನಶಾ ಮುಕ್ತ ಭಾರತ’ ಅಭಿಯಾನಕ್ಕೆ ಬೆಂಬಲ : ಪಾದಯಾತ್ರೆಗೆ ಚಾಲನೆ ನೀಡಿದ ಕೇಂದ್ರ ಸಚಿವ ಕಿಶನ್ ರೆಡ್ಡಿ
ಹೈದರಾಬಾದ್ : ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ ಕಲ್ಲಿದ್ದಲು ಸಚಿವ ಜಿ. ಕಿಶನ…
◷ 25/11/2026
ಕೋಟ್ಯಧಿಪತಿಯಾದ ಮಾದಪ್ಪ!
ಚಾಮರಾಜನಗರ : ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, 27 ದಿನಗಳ ಅವಧಿಯಲ್ಲಿ 2.50 ಕೋಟಿ ರೂ. ಕ…
◷ 25/11/2026
