ಯಡವನಹಳ್ಳಿ ಗ್ರಾಮದಲ್ಲಿ ರೈತನ ಮೇಲೆ ಹುಲಿ ದಾಳಿ : ಗಾಯ

ಗುಂಡ್ಲುಪೇಟೆ : ತಾಲೂಕಿನ ಕಾಡಂಚಿನ ಯಡವನಹಳ್ಳಿ ಗ್ರಾಮದ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ರೈತನ ಮೇಲೆ ಹುಲಿಯೊಂದು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ.ಗ್ರಾಮದ ರೈತ ಸಿದ್ದಬಸವನಾಯಕ ಅವರು ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಏಕಾಏಕಿ ಬಂದ ಹುಲಿ ದಾಳಿ ನಡೆಸಿದೆ. ದಾಳಿಯಿಂದ ಅವರ ಕೈ ಹಾಗೂ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿವೆ. ಘಟನೆ ತಿಳಿದ ತಕ್ಷಣ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಾಳು ಸಿದ್ದಬಸವನಾಯಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹುಲಿ ಸೆರೆಗೆ ಗ್ರಾಮಸ್ಥರ ಒತ್ತಾಯ
ಕಾಡಂಚಿನ ಗ್ರಾಮಗಳಲ್ಲಿ ಹುಲಿ ಸೇರಿದಂತೆ ವನ್ಯಜೀವಿಗಳ ಹಾವಳಿ ಹೆಚ್ಚಾಗುತ್ತಿದ್ದು, ಜನರು ಆತಂಕದಿಂದ ಜೀವನ ನಡೆಸುವಂತಾಗಿದೆ. ರೈತನ ಮೇಲೆ ದಾಳಿ ನಡೆಸಿರುವ ಹುಲಿಯನ್ನು ಕೂಡಲೇ ಸೆರೆಹಿಡಿದು, ಗ್ರಾಮಸ್ಥರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ತು ಇಡೀ ಜಗತ್ತೇ ವಿಸ್ಮಯದಿಂದ ನೋಡುವ ಏಕೈಕ ಸಂಸ್ಥೆ : ಡಾ.ವೈ.ಡಿ.ರಾಜಣ್ಣ
ವಿನಯ್ ದೊಡ್ಡಕೊಪ್ಪಲುಕೆ.ಆರ್.ನಗರ : ಕನ್ನಡ ಸಾಹಿತ್ಯ ಪರಿಷತ್ತು ಇಡೀ ಜಗತ್ತೇ ವಿಸ್ಮಯದಿಂದ ನೋಡುವ ಏಕೈಕ ಸಂಸ್ಥೆ ಎಂದು ಜಿಲ್ಲಾ ಕನ್ನ…
◷ 24/11/2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಸಾಧಿಸಲು ವಿಶೇಷ ಕಾಳಜಿ ವಹಿಸಿ: ಭುವನೇಶ ಪಾಟೀಲ್
ಧಾರವಾಡ : ವಿದ್ಯಾರ್ಥಿಗಳಿಗೆ ಕೇವಲ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಶಿಕ್ಷಣ ನೀಡುವುದಷ್ಟೇ ಶಿಕ್ಷಣ ಇಲಾಖೆಯ ಉದ್ದೇಶವಾಗಬಾರದು. ಅವರು…
◷ 24/11/2026
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನ ಸದ್ಬಳಕೆಗೆ ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ: ನಿರ್ಲಕ್ಷ್ಯ ವಹಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ
ಬಳ್ಳಾರಿ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ನಿಗದಿತ ಕಾಲಮಿತಿಯೊಳಗೆ …
◷ 24/11/2026
ಬಳ್ಳಾರಿ ಕನಕದುರ್ಗಮ್ಮ ದೇವಸ್ಥಾನದ ಹುಂಡಿಯಲ್ಲಿ 1.17 ಕೋಟಿ ಕಾಣಿಕೆ ಸಂಗ್ರಹ
ಬಳ್ಳಾರಿ : ನಗರದ ಕನಕದುರ್ಗಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವು ಸೋಮವಾರ ಅತ್ಯಂತ ಪಾರದರ್ಶಕವಾಗಿ ನಡೆದಿದ್ದು, ಒಟ್ಟು 1,17,87,9…
◷ 24/11/2026
