ಬಳ್ಳಾರಿ : ನಗರದ ಕನಕದುರ್ಗಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯವು ಸೋಮವಾರ ಅತ್ಯಂತ ಪಾರದರ್ಶಕವಾಗಿ ನಡೆದಿದ್ದು, ಒಟ್ಟು 1,17,87,950 ಕಾಣಿಕೆ ಸಂಗ್ರಹವಾಗಿದೆ.ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಚ್. ಸವಿತಾ, ಬಳ್ಳಾರಿ ತಾಲೂಕು ಉಪ ತಹಶೀಲ್ದಾರ್ ಕೆ.ಎಸ್. ಮಂಜುನಾಥ್ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗೌಡರ ಯುವರಾಜಗೌಡ ಅವರ ನೇತೃತ್ವದಲ್ಲಿ ಹುಂಡಿಯನ್ನು ತೆರೆಯಲಾಯಿತು.ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಬ್ಯಾಂಕ್ ಸಿಬ್ಬಂದಿ, ಗೃಹರಕ್ಷಕ ದಳ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರ ಸಮಕ್ಷಮದಲ್ಲಿ ಎಣಿಕೆ ಕಾರ್ಯವು ಸುಸೂತ್ರವಾಗಿ ನೆರವೇರಿತು. ಎಣಿಕೆ ಪೂರ್ಣಗೊಂಡ ಬಳಿಕ ಸಂಗ್ರಹವಾದ ಸಂಪೂರ್ಣ ಮೊತ್ತವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.