ಇನ್ವೆಸ್ಟ್ ಕರ್ನಾಟಕ 2027ಗೆ ಪ್ಯಾನಾಸೋನಿಕ್ ಆಟೋಮೋಟಿವ್ ಸಂಸ್ಥೆಯ ಪ್ರತಿನಿಧಿಗಳನ್ನು ಆಹ್ವಾನಿಸಿದ ಸಿಎಂ

ಬೆಂಗಳೂರು : ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ಅವರೊಂದಿಗೆ ಜಪಾನ್‌ನಲ್ಲಿ ಪ್ಯಾನಾಸೋನಿಕ್ ಆಟೋಮೋಟಿವ್ ಸಂಸ್ಥೆಯ ಅಧ್ಯಕ್ಷ ಮತ್ತು ಸಿಇಒ ಮೈಕ್ ನಾಗಯಾಸು ಅವರ ನೇತೃತ್ವದ ಆಡಳಿತ ಮಂಡಳಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಸುಧಾರಿತ ಉತ್ಪಾದನಾ ವಲಯದಲ್ಲಿ ಕರ್ನಾಟಕದ ಸಾಮರ್ಥ್ಯ ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ ಸ್ಥಾಪನೆಗೆ ರಾಜ್ಯದಲ್ಲಿರುವ ಅವಕಾಶಗಳನ್ನು ಈ ವೇಳೆ ಸಂಸ್ಥೆಯ ಗಮನಕ್ಕೆ ತಂದರು. ಕರ್ನಾಟಕದಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸುವ ಹಾಗೂ ಹೊಸ ಹೂಡಿಕೆಗಳನ್ನು ಕೈಗೊಳ್ಳುವ ಸಾಧ್ಯತೆಗಳ ಕುರಿತು ಚರ್ಚಿಸಿ, ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವ ಭರವಸೆ ನೀಡಿದರು.2027ರ ಏಪ್ರಿಲ್ 20ರಿಂದ 22ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ‘ಗ್ಲೋಬಲ್ ಇನ್ವೆಸ್ಟರ್ಸ್ ಮೀಟ್ – ಇನ್ವೆಸ್ಟ್ ಕರ್ನಾಟಕ 2027’ರಲ್ಲಿ ಭಾಗವಹಿಸುವಂತೆ ಪ್ಯಾನಾಸೋನಿಕ್ ಆಟೋಮೋಟಿವ್ ಸಂಸ್ಥೆಯ ಪ್ರತಿನಿಧಿಗಳನ್ನು ಆಹ್ವಾನಿಸಿ, ಕರ್ನಾಟಕ ಮತ್ತು ಜಪಾನ್ ನಡುವಿನ ಕೈಗಾರಿಕಾ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಸಂಬಂಧಿತ ಸುದ್ದಿಗಳು

ಉರುಳಿಗೆ ಸಿಲುಕಿದ್ದ ಚಿರತೆ
ಶಿರಸಿ: ದುರುಳರು ಹಾಕಿದ್ದ ಉರುಳಿಗೆ ಸುಮಾರು ನಾಲೈದು ವರ್ಷ ವಯಸ್ಸಿನ ಚಿರತೆಯೊಂದು ಸಿಲುಕಿಕೊಂಡ ಘಟನೆ ಬನವಾಸಿ ಸಮೀಪದ ಬೆಂಗಳೆ-ಗುಡ್ಡ…
◷ 25/11/2026
ಡಿಸೆಂಬರ್ ಒಳಗೆ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಸಚಿವ ಕೃಷ್ಣಬೈರೇಗೌಡ ಸೂಚನೆ
ಬೆಂಗಳೂರು : ಡಿಸೆಂಬರ್ ಒಳಗೆ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚ…
◷ 25/11/2026
ಮಾನವೀಯ ಸೇವೆಗೆ ಮತ್ತೂಮ್ಮೆ ಸಾಕ್ಷಿಯಾದ ಬಿಎಂಆರ್ಸಿಎಲ್ !
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಮಾನವೀಯ ಸೇವೆಗೆ ಮತ್ತೂಮ್ಮೆ ಸಾಕ್ಷಿಯಾಗಿದೆ.ನಗರದ ಗೊರಗುಂಟೆಪ…
◷ 25/11/2026
ಯುವಜನತೆ ಇತಿಹಾಸ ಪ್ರಸಿದ್ಧ ಸ್ಥಳಗಳ ಸಂದರ್ಶನ, ಅಧ್ಯಯನ ಮಾಡಬೇಕು : ಸುರೇಶ್. ಎನ್. ಋಗ್ವೇದಿ
ಚಾಮರಾಜನಗರ : ಭಾರತದಲ್ಲಿರುವ ಧಾರ್ಮಿಕ ಕೇಂದ್ರಗಳು, ಇತಿಹಾಸ ಪ್ರಸಿದ್ಧ ಸ್ಥಳಗಳ ಸಂದರ್ಶನ ಮತ್ತು ಅಧ್ಯಯನವನ್ನು ಯುವಕರು ಮತ್ತು ವಿದ್…
◷ 25/11/2026
