ರಾಮನಗರ:  ಇಂದು ರಾಮನಗರದ ಜಾನಪದ ಲೋಕದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರ ವಿವಾಹ ಕಾರ್ಯಕ್ರಮ ನಡೆಯುತ್ತಿದೆ. ಸರಳವಾಗಿ ಮಂತ್ರಮಾಂಗಲ್ಯ   ಪದ್ಧತಿಯಲ್ಲಿ ದರ್ಶನ್ ಧ್ರುವನಾರಾಯಣ್  ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಮೂಲದ ಡಾ.ಶ್ರೀನಿಧಿ ಅವರನ್ನು ಶಾಸಕ ದರ್ಶನ್ ಧ್ರುವನಾರಾಯಣ್ ವರಿಸಲಿದ್ದಾರೆ. ವಿಶೇಷವೆಂದರೆ, ಆಡಂಬರಕ್ಕೆ ಆಸ್ಪದ ನೀಡದೆ, ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಸರಳವಾಗಿ ಮಂತ್ರಮಾಂಗಲ್ಯ ಪದ್ಧತಿಯ ಮೂಲಕ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಶಾಸಕರ ವಿವಾಹ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ ಸಚಿವ ಸಂಪುಟದ ಹಲವು ಸಚಿವರು, ಶಾಸಕರು ಹಾಗೂ ರಾಜಕೀಯ ಗಣ್ಯರು ಆಗಮಿಸಿ ನವದಂಪತಿಗೆ ಶುಭ ಹಾರೈಸಲಿದ್ದಾರೆ.