ರಾಮನಗರ :  ಇಂದು ರಾಮನಗರದ ಜಾನಪದ ಲೋಕದಲ್ಲಿ ನಡೆದ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಅವರ ಮಂತ್ರ ಮಾಂಗಲ್ಯ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪಾಲ್ಗೊಂಡು, ನೂತನ ದಂಪತಿಗೆ ಶುಭಹಾರೈಸಿದರು.ಸರಳತೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾದ ಮಂತ್ರ ಮಾಂಗಲ್ಯದ ಮೂಲಕ ಹೊಸ ಜೀವನಕ್ಕೆ ಮುನ್ನುಡಿ ಬರೆದಿರುವ ನವಜೋಡಿಯ ಬಾಳ ಪಯಣದ ಪ್ರತಿ ಹೆಜ್ಜೆಯೂ ಸಂತಸ, ಸೌಹಾರ್ದ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಸಿಎಂ ಶುಭ ಹಾರೈಸಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಇದ್ದರು.