ಕೊಡಸೋಗೆ ಗ್ರಾಮದಲ್ಲಿ ಪಡಿತರ ವಿತರಣೆಗೆ ಸರ್ವರ್ ಕಾಟ : ರೇಷನ್ ಪಡೆಯಲು ಕಾರ್ಡ್ದಾರರ ಪರದಾಟ

ಗುಂಡ್ಲುಪೇಟೆ : ತಾಲೂಕಿನ ಕೊಡಸೋಗೆ ಗ್ರಾಮದಲ್ಲಿ ಪಡಿತರ ವಿತರಣೆ ವೇಳೆ ಸರ್ವರ್ ಸಮಸ್ಯೆ ಎದುರಾಗಿದ್ದು, ಪಡಿತರ ಪಡೆಯಲು ಬಂದ ಕಾರ್ಡ್ದಾರರು ಪರದಾಡುವಂತಾಗಿದೆ.ಪಡಿತರ ವಿತರಣೆಗೆ ಅಗತ್ಯವಿರುವ ಸರ್ವರ್ ಪದೇಪದೇ ಕೈಕೊಡುತ್ತಿರುವುದರಿಂದ ವಿತರಣೆ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇದರಿಂದ ನ್ಯಾಯಬೆಲೆ ಅಂಗಡಿಗೆ ಬಂದಿರುವ ಸಾರ್ವಜನಿಕರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಕೂಲಿ ಕೆಲಸಕ್ಕೆ ತೆರಳುವವರು ಪಡಿತರ ಪಡೆಯಲು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಸರ್ವರ್ ಸಮಸ್ಯೆಯಿಂದಾಗಿ ಒಂದೇ ದಿನದಲ್ಲಿ ಪಡಿತರ ಪಡೆಯಲು ಸಾಧ್ಯವಾಗದೆ ಮತ್ತೆ ಅಂಗಡಿಗೆ ಅಲೆದಾಡುವಂತಾಗಿದೆ ಎಂದು ಕಾರ್ಡ್ದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪಡಿತರ ವಿತರಣೆಯ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಉಂಟಾಗದಂತೆ ಸಂಬಂಧಪಟ್ಟ ಇಲಾಖೆ ಅಗತ್ಯ ಕ್ರಮ ಕೈಗೊಂಡು, ಸಾರ್ವಜನಿಕರಿಗೆ ಸುಗಮವಾಗಿ ಪಡಿತರ ವಿತರಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಂಬಂಧಿತ ಸುದ್ದಿಗಳು

ಉರುಳಿಗೆ ಸಿಲುಕಿದ್ದ ಚಿರತೆ ಮರಿ ರಕ್ಷಣೆ
ಮಂಡ್ಯ : ಜಮೀನಲ್ಲಿ ಉರುಳಿಗೆ ಸಿಲುಕಿದ್ದ ಚಿರತೆ ಮರಿಯನ್ನು ರಕ್ಷಣೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆರೆಮೇಗಲ ದೊಡ…
◷ 27/11/2026
ದೇವಾಲಯಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯವನ್ನು ಬೆಸೆಯುವ ಕೇಂದ್ರ : ಅಡಗೂರು ಎಚ್.ವಿಶ್ವನಾಥ್ ಅಭಿಮತ
ವಿನಯ್ ದೊಡ್ಡಕೊಪ್ಪಲುಕೆ.ಆರ್.ನಗರ : ದೇವಾಲಯಗಳು ಕೇವಲ ಪೂಜಾ ಕೇಂದ್ರಗಳಲ್ಲ, ಅವು ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸಾಮರಸ್ಯವನ್ನ…
◷ 26/11/2026
ಸಂವಿಧಾನವು ನಮ್ಮೆಲ್ಲರ ನ್ಯಾಯದ ಆಧಾರ ಮತ್ತು ಪ್ರಜಾಪ್ರಭುತ್ವದ ಶಕ್ತಿ : ಸಿಎಂ ಡಿ.ಕೆ. ಶಿವಕುಮಾರ್
ಮೈಸೂರಿನಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ
◷ 26/11/2026
ಸಂವಿಧಾನ ಉಳಿದರೆ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತದೆ; ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಎನ್. ಚಲುವರಾಯಸ್ವಾಮಿ
ಮೈಸೂರು: ಸಂವಿಧಾನ ಉಳಿದರೆ ಮಾತ್ರ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುತ್ತದೆ ಮತ್ತು ಸಾಮಾನ್ಯ ಪ್ರಜೆಯ ಮತಕ್ಕೆ ಬೆಲೆ ಇರುತ್ತದೆ. ಸಂವಿ…
◷ 26/11/2026
