ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಸಿಎಂ ಕರೆ

ಬೆಂಗಳೂರು : ಕನ್ನಡಿಗರಿಗೆ ಸಿಗಬೇಕಾದ ನ್ಯಾಯಯುತ ಉದ್ಯೋಗಾವಕಾಶಗಳನ್ನು ನೀಡುವುದಲ್ಲದೆ, ಕನ್ನಡ ಮತ್ತು ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಎದುರಾಗಿದ್ದು, ಅವುಗಳನ್ನು ಪರಿಹರಿಸುವುದನ್ನು ನಾವು ಖಚಿತಪಡಿಸಿಕೊಳ್ಳಲು ಬಯಸುವುದಾಗಿ ಹೇಳಿದ್ದಾರೆ. ಕನ್ನಡಿಗರಿಗೆ ತಾರತಮ್ಯ ಧೋರಣೆ ವಿಚಾರ ಸಂಬಂಧ ಖಾಸಗಿ ಕಂಪನಿಗಳಿಗೆ ಅವರು ಕೆಲವು ಮಹತ್ವದ ಸಂದೇಶ ನೀಡಿದ್ದು, ಪ್ರತಿಭಾವಂತ ಕನ್ನಡಿಗರು ಹೇರಳವಾಗಿದ್ದಾರೆ. ಸರ್ಕಾರವು ಬೆಂಬಲಕ್ಕೆ ನಿಲ್ಲಲಿದ್ದು, ಕನ್ನಡದ ಹೆಸರಿನಲ್ಲಿ ಯಾರೂ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು, ಬೆದರಿಕೆ ಹಾಕುವುದು ಅಥವಾ ನೈತಿಕ ಪೊಲೀಸ್‌ಗಿರಿಯನ್ನು ಸಹಿಸಲ್ಲ. ಆದರೆ ಐಟಿ, ಖಾಸಗಿ ಕಂಪನಿಗಳಿಗೂ ಜವಾಬ್ದಾರಿ ಇದೆ ಎಂದವರು ತಿಳಿಸಿದ್ದಾರೆ. ಕೌಶಲ್ಯಾಧಾರಿತ ನೇಮಕಾತಿ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲ್ಲ . ಆದರೆ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಗಮನಾರ್ಹ ಪಾಲು ಸಿಗಲೇಬೇಕು. ರಾಜ್ಯದಲ್ಲೂ ಪ್ರತಿಭಾವಂತ ಕನ್ನಡಿಗರು ಹೇರಳವಾಗಿದ್ದಾರೆ. ಅವರಿಗೆ ಅರ್ಹವಾದ ಅವಕಾಶಗಳನ್ನು ಕಲ್ಪಿಸಿಕೊಡಿ. ಸ್ವಾರ್ಥ ಹಿತಾಸಕ್ತಿಗಳಿಗಾಗಿ ಕನ್ನಡದ ವಿಷಯವನ್ನು ಯಾರೂ ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸಂಬಂಧಿತ ಸುದ್ದಿಗಳು

ಜೀವ ವೈವಿಧ್ಯವನ್ನು ಉಳಿಸಲು ಉರಗ ಅತ್ಯವಶ್ಯ: ಮ.ನ. ಪ್ರಸನ್ನ ಕುಮಾರ್ ಹೇಳಿಕೆ
ಮದ್ದೂರು : ಉರಗಗಳು ಭೂಮಿಯ ಮೇಲಿನ ಪ್ರಮುಖ ಜೀವಿಗಳಲ್ಲಿ ಒಂದಾಗಿದ್ದು ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಮತ್ತು ಜೀವ ವೈವಿಧ್ಯ…
◷ 06/11/2026
ಬೋಳುಗುಡ್ಡ ಕ್ಯಾಂಪ್ಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಗುಂಡ್ಲುಪೇಟೆ : ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೋಳುಗುಡ್ಡ ಕ್ಯಾಂಪ್ಗ…
◷ 06/11/2026
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದೆ : ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ
ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದ್ದು, ಹಣಕಾಸು ನಿರ್ವಹಣೆ ಮಾಡಲು ಸಾ…
◷ 06/11/2026
ರಾಹುಲ್ ಗಾಂಧಿಯಿಂದ ಅರಾಜಕತೆ ಸೃಷ್ಟಿಸಲು ಅನಗತ್ಯ ಯತ್ನ : ಗೌರವ್ ಭಾಟಿಯಾ ವಾಗ್ದಾಳಿ
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸಿ ವಿಫಲರಾಗಿದ್ದಾರೆ ಎಂದು ಬ…
◷ 06/11/2026
