ಬಿಡಾಡಿ ದನಗಳ ಹಾವಳಿ : ವಾಹನ ಸವಾರರಿಗೆ ಸಂಚಾರದ ಕಿರಿಕಿರಿ

ಗುಂಡ್ಲುಪೇಟೆ : ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಇಲ್ಲಿನ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.ರಸ್ತೆಗಳ ಮಧ್ಯದಲ್ಲೇ ದನಗಳು ಗುಂಪು ಗುಂಪಾಗಿ ನಿಲ್ಲುವುದು ಹಾಗೂ ಸಂಚರಿಸುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ದನಗಳಿಂದಾಗಿ ಅಪಘಾತದ ಭೀತಿಯಲ್ಲಿ ಸಂಚರಿಸುವಂತಾಗಿದೆ. ಕೆಲವೊಮ್ಮೆ ರಸ್ತೆಯಲ್ಲೇ ದನಗಳು ಮಲಗಿರುವುದರಿಂದ ವಾಹನ ಚಾಲಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ, ಬಿಡಾಡಿ ದನಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಪಟ್ಟಣದ ನಿವಾಸಿಗಳು ಒತ್ತಾಯಿಸಿದ್ದಾರೆ.
ಸಂಬಂಧಿತ ವಿಡಿಯೊ / Watch video
ಸಂಬಂಧಿತ ಸುದ್ದಿಗಳು

ಜೀವ ವೈವಿಧ್ಯವನ್ನು ಉಳಿಸಲು ಉರಗ ಅತ್ಯವಶ್ಯ: ಮ.ನ. ಪ್ರಸನ್ನ ಕುಮಾರ್ ಹೇಳಿಕೆ
ಮದ್ದೂರು : ಉರಗಗಳು ಭೂಮಿಯ ಮೇಲಿನ ಪ್ರಮುಖ ಜೀವಿಗಳಲ್ಲಿ ಒಂದಾಗಿದ್ದು ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಮತ್ತು ಜೀವ ವೈವಿಧ್ಯ…
◷ 06/11/2026
ಬೋಳುಗುಡ್ಡ ಕ್ಯಾಂಪ್ಗೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಗುಂಡ್ಲುಪೇಟೆ : ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬೋಳುಗುಡ್ಡ ಕ್ಯಾಂಪ್ಗ…
◷ 06/11/2026
ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದೆ : ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ
ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದ್ದು, ಹಣಕಾಸು ನಿರ್ವಹಣೆ ಮಾಡಲು ಸಾ…
◷ 06/11/2026
ರಾಹುಲ್ ಗಾಂಧಿಯಿಂದ ಅರಾಜಕತೆ ಸೃಷ್ಟಿಸಲು ಅನಗತ್ಯ ಯತ್ನ : ಗೌರವ್ ಭಾಟಿಯಾ ವಾಗ್ದಾಳಿ
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಅನಗತ್ಯವಾಗಿ ಅರಾಜಕತೆ ಸೃಷ್ಟಿಸಲು ಯತ್ನಿಸಿ ವಿಫಲರಾಗಿದ್ದಾರೆ ಎಂದು ಬ…
◷ 06/11/2026
