ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದೆ : ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ

ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ತಪ್ಪಿದ್ದು, ಹಣಕಾಸು ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟು ಮನೆಗೆ ಹೋಗಲಿ ಎಂದು ಸಂಸದ ಜಗದೀಶ್ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದರು.ಕೊಪ್ಪಳದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದು, ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹಾಲಿನ ದರ ಏರಿಕೆಯಿಂದ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಾಗಿದ್ದು, ಜನರ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ.ಸರ್ಕಾರದ ಬೆಲೆ ಏರಿಕೆ ಕ್ರಮಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ಹೇಳುವ ಸರ್ಕಾರ, ಇಲಾಖೆಯ ಆರ್ಥಿಕ ಸ್ಥಿತಿ ಸುಧಾರಿಸುವ ಬದಲು ಪ್ರಯಾಣ ದರ ಹೆಚ್ಚಳದ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ. ಗ್ಯಾರಂಟಿ ಯೋಜನೆಗಳ ಬದಲಿಗೆ ರೈತರಿಗೆ ಪ್ರೋತ್ಸಾಹಧನ ನೀಡುವ ಮೂಲಕ ಕೃಷಿ ಕ್ಷೇತ್ರಕ್ಕೆ ನೆರವಾಗಬೇಕಿತ್ತು. ಆದರೆ, ಯಾವುದೇ ಸಮರ್ಪಕ ಹಣಕಾಸು ನಿರ್ವಹಣೆ ಇಲ್ಲದೆ ಸರ್ಕಾರ ಘೋಷಣೆಗಳನ್ನು ಮಾಡುತ್ತಾ ಸಾಗುತ್ತಿದೆ ಎಂದು ಆರೋಪಿಸಿದರು.
ಸಂಬಂಧಿತ ಸುದ್ದಿಗಳು

ಹಳ್ಳಿಗುಗ್ಗು ಹೇಳಿಕೆ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಸಚಿವ ಹೆಚ್.ಡಿ ಕುಮಾರಸ್ವಾಮಿ ಹಳ್ಳಿ ಗುಗ್ಗು ಎಂಬ ಹೇಳಿಕೆಯನ್ನು ಮತ್ತೊಮ್ಮೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮರ್ಥಿಸಿಕೊ…
◷ 05/11/2026
ಬಸ್ ಪ್ರಯಾಣ ದರ ಏರಿಕೆಗೆ ಖಂಡನೆ : ಬಿಜೆಪಿ ಪ್ರತಿಭಟನೆ
ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೆಜ…
◷ 05/11/2026
ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಸಿಎಂ
ಬೆಂಗಳೂರು : ಇಲ್ಲಿನ ಫ್ರೀಡಂ ಪಾರ್ಕ್ನಲ್ಲಿ ಇಂದು 'ಇಂಡಿಯಾ' ಒಕ್ಕೂಟದ ಪಕ್ಷಗಳು ಕರೆ ನೀಡಿದ್ದ "ಮತ ಉಳಿಸಿ-ದೇಶ ಉಳಿಸಿ" (ವೋಟ್ ಬಚಾ…
◷ 05/11/2026
ಪ್ರಿಯಾಂಕ್ ಖರ್ಗೆ ನಾಲಿಗೆಗೆ ಲಗಾಮು ಹಾಕಲಿ, ಹಳ್ಳಿಗಾಡಿನ ಜನರ ಕ್ಷಮೆ ಕೇಳಲಿ : ಎಂ.ಎಲ್.ಸಿ. ಬೋಜೇಗೌಡ ವಾಗ್ದಾಳಿ
ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಸರ್ಕಾರದ ನಡೆ ಅನುಮಾನಾಸ್ಪದ ; ಸಮಗ್ರ ತನಿಖೆಗೆ ಆಗ್ರಹ
◷ 05/11/2026
