2028ರ ವಿಧಾನಸಭೆ ಚುನಾವಣೆ ಗುರಿ: ಈಗಿನಿಂದಲೇ ಸಿದ್ಧತೆ ಆರಂಭಿಸಲು ಬಿಜೆಪಿ ಮುಖಂಡರಿಗೆ ಹರೀಶ್ ದ್ವಿವೇದಿ ಸೂಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಸದ್ಯದ ಸಮಯವನ್ನು ಸದ್ಬಳಕೆ ಮಾಡಿಕೊಂಡು ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ರಾಜ್ಯದ ಮುಖಂಡರಿಗೆ ಸಲಹೆ ನೀಡಿದ್ದಾರೆ.ಸೋಮವಾರ ಮಲ್ಲೇಶ್ವರದ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಸ್ಸಾಂ ಚುನಾವಣೆಯ ಕಾರ್ಯತಂತ್ರವನ್ನು ಉಲ್ಲೇಖಿಸಿ, ಕರ್ನಾಟಕದಲ್ಲಿಯೂ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟಿತ ಪ್ರಯತ್ನ ನಡೆಸಬೇಕು ಎಂದರು.
ಇತ್ತೀಚೆಗೆ ನಡೆದ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಗೆಲುವಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಇದೇ ಉತ್ಸಾಹವನ್ನು ಮುಂದುವರಿಸಿ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದು ಸೂಚಿಸಿದರು.
ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಚಟುವಟಿಕೆಗಳನ್ನು ಯಶಸ್ವಿಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಮೂಲಕ ಸಂಘಟನೆಯನ್ನು ಬಲಪಡಿಸಬೇಕು ಎಂದು ತಿಳಿಸಿದರು.
ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ಹರೀಶ್ ದ್ವಿವೇದಿ ಅವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಜಗನ್ನಾಥ ರಾವ್ ಜೋಶಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಇದೇ ವೇಳೆ ಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿದ್ದು, ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.
ಸಂಬಂಧಿತ ಸುದ್ದಿಗಳು

ಅಗತ್ಯ ವಸ್ತುಗಳ ಬೆಲೆ ಇಳಿಸಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಿ: ಶೋಭಾ ಕರಂದ್ಲಾಜೆ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್…
◷ 02/11/2026
ನಂದಿನಿ ಮೊಸರು ಪ್ರತಿ ಲೀಟರ್ಗೆ 2 ರೂ. ಇಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ
ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮುಖ್…
◷ 02/11/2026
ಕರ್ನಾಟಕ ರಾಜ್ಯೋತ್ಸವ ಕನ್ನಡಿಗರ ಸ್ವಾಭಿಮಾನವನ್ನು ಸ್ಮರಿಸುವ ಪವಿತ್ರ ದಿನ: ಡಾ ಯತೀಂದ್ರ ಸಿದ್ದರಾಮಯ್ಯ
ನವೆಂಬರ್ 1 ಕನ್ನಡಿಗರ ಪಾಲಿಗೆ ಕೇವಲ ಒಂದು ಹಬ್ಬವಲ್ಲ
◷ 02/11/2026
ಹಾಲಿನ ದರ ಏರಿಕೆ ಅನಿವಾರ್ಯ: ರೈತರ ಆದಾಯ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿಕೆಶಿ!
ರಾಜ್ಯದಲ್ಲಿ ನವೆಂಬರ್ 1ರಿಂದ ಜಾರಿಗೆ ಬರುವಂತೆ ನಂದಿರ್ಕಾರ
◷ 01/11/2026
