ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಹಲವೆಡೆ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ವಿಜಯೇಂದ್ರ ಅವರ ಮನೆ ಬಳಿ ಭಿತ್ತಿಪತ್ರಗಳನ್ನು ಅಂಟಿಸಿರುವ ಕಾರ್ಯಕರ್ತರು, ಹೇಳಿಕೆಗಳಿಗೆ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ. ರಾಜಾಜಿನಗರ, ಮಂಜುನಾಥನಗರ ಸೇರಿದಂತೆ ವಿವಿಧೆಡೆ ಪೋಸ್ಟರ್‌ಗಳನ್ನು ಹಾಕಲಾಗಿದ್ದು, ಅವುಗಳಲ್ಲಿ ವಿಜಯೇಂದ್ರ ಅವರನ್ನು ಟೀಕಿಸುವ ಬರಹಗಳಿವೆ. ಇದರಿಂದ ಬೆಂಗಳೂರಿನಲ್ಲಿ ಕಾಂಗ್ರೆಸ್-ಬಿಜೆಪಿ ನಡುವಿನ ಪೋಸ್ಟರ್ ವಾರ್ ಮತ್ತೆ ಮುನ್ನೆಲೆಗೆ ಬಂದಿದೆ.