ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ : ಕೆ.ಎನ್.ರಾಜಣ್ಣ ಬೇಸರ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇಡೀ ಕರ್ನಾಟಕಕ್ಕೆ ದೊಡ್ಡ ಕಳಂಕ ತಂದಿಟ್ಟಿದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ತೀವ್ರ ಬೇಸರ ವ್ಯಕ್ತಪಡಿಸಿದರು.ಶಾಸಕರ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಗೆ ಗುಜರಾತ್ ಮಾಡೆಲ್ ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಅದೇ ರೀತಿ ಮುಂದೆ ದೇಶಾದ್ಯಂತ ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿಗೆ ಕಾರಣವಾಗುತ್ತದೆ.ಇದರಿಂದ ಕರ್ನಾಟಕದ ಗೌರವಕ್ಕೆ ಧಕ್ಕೆಯಾಗಲಿದ್ದು, ಕನ್ನಡಿಗರು ತಲೆತಗ್ಗಿಸುವಂತಾಗಿದೆ ಎಂದು ಖೇದ ವ್ಯಕ್ತಪಡಿಸಿದರು.ಸ್ಟಿಂಗ್ ಆಪರೇಷನ್ ಪ್ರಕರಣದಿಂದಾಗಿ ಸಾರ್ವಜನಿಕರಲ್ಲಿ ಭಾರೀ ಗೊಂದಲ ನಿರ್ಮಾಣವಾಗಿದ್ದು, ರಾಜ್ಯದ ರಾಜಕೀಯ ವರ್ಚಸ್ಸಿಗೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಬೇಸರ ಹೊರಹಾಕಿದರು.ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಯ ಅಗತ್ಯವನ್ನು ಪ್ರತಿಪಾದಿಸಿದ ರಾಜಣ್ಣ, ತನಿಖೆಯು ಉನ್ನತ ಮಟ್ಟದ್ದಾಗಲಿ ಅಥವಾ ಕೆಳಮಟ್ಟದ್ದಾಗಲಿ ಒಟ್ಟಿನಲ್ಲಿ ಸೂಕ್ತವಾದ ತನಿಖೆ ನಡೆದು ಅಸಲಿ ಸತ್ಯ ಹೊರಬರಬೇಕಿದೆ ಎಂದರು. ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ಯಾರೂ ಮಾಡಲು ಧೈರ್ಯ ಮಾಡದಂತೆ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.ಸ್ಟಿಂಗ್ ಆಪರೇಷನ್ ವಿಚಾರದ ಪರಿಣಾಮ ಪರಿಷತ್ ಚುನಾವಣೆಯ ಮೇಲೂ ಬೀರಿದೆ. ವಿದ್ಯಾವಂತ ಮತದಾರರು ಪ್ರತಿಯೊಂದು ವಿಚಾರವನ್ನೂ ವಿಶ್ಲೇಷಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಈ ವಿಚಾರದಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಲು ಅವರಿಗೆ ಅವಕಾಶವಿದೆ. ತುಮಕೂರು ಸೇರಿ 5 ಜಿಲ್ಲೆಗಳ ವ್ಯಾಪ್ತಿಯನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 35 ವಿಧಾನಸಭಾ ಕ್ಷೇತ್ರಗಳಿದ್ದು, ಕಾಂಗ್ರೆಸ್ನ 26 ಶಾಸಕರಿದ್ದರೂ ಸೋಲು ಅನುಭವಿಸಿರುವುದು ಪಕ್ಷಕ್ಕೆ ಮುಖಭಂಗವಾಗಿದೆ ಎಂದು ತಿಳಿಸಿದರು. ಹಾಗೆ ನೋಡಿದರೆ ಸೋಲಿನ ಜವಾಬ್ದಾರಿ ಹೊತ್ತು ನನ್ನನ್ನೂ ಸೇರಿ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಡಬೇಕು. ನಾವು ಗೆಲ್ಲಲು ಆಗಿಲ್ಲ ಅಂದ್ರೆ 26 ಜನವೂ ಕೂಡ ನಾವು ಜವಾಬ್ದಾರಿ ಹೊತ್ತು ರಾಜೀನಾಮೆ ಕೊಡಬೇಕು ಎಂದರು.
ಸಂಬಂಧಿತ ಸುದ್ದಿಗಳು

ಭೀಕರ ಬರ ಹಿನ್ನೆಲೆ : ಕೇಂದ್ರಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪತ್ರ
ಅಗತ್ಯ ಕ್ರಮಕ್ಕೆ ಆಗ್ರಹ
◷ 03/11/2026
ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್
2,328 ಕೋಟಿ ರೂ. ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ
◷ 03/11/2026
ಕಬ್ಬು ಬೆಳೆಗಾರರಿಗೆ ಕನಿಷ್ಠ 750 ರೂ.ಬೆಲೆಯನ್ನಾದರೂ ನೀಡಲಿ
ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
◷ 03/11/2026
ಬೆಂಗಳೂರಿನಲ್ಲಿ ಮತ್ತೆ ಪೋಸ್ಟರ್ ವಾರ್; ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ…
◷ 03/11/2026
