ಶತಕ ಸಿಡಿಸಿದ ಆರ್ಯವೀರ್ ಸೆಹ್ವಾಗ್ !

ನವದೆಹಲಿ: ಯುಎಇ ವಿರುದ್ಧದ ಮಹತ್ವದ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಎಲ್ಲರ ಗಮನ ಸೆಳೆದ ಭಾರತದ ಮಾಜಿ ಸ್ಫೋಟಕ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಅಂಡರ್-19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ತಂದೆಯ ಹಾದಿಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.ನವೆಂಬರ್ 10ರಂದು ಒಮಾನ್‌ನ ಅಲ್ ಅಮೆರತ್ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಮತ್ತು ಯುಎಇ ನಡುವಿನ ಪಂದ್ಯದಲ್ಲಿ ಆರ್ಯವೀರ್ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದರು. ಆರಂಭದಲ್ಲಿ ಎಚ್ಚರಿಕೆಯ ಆಟಕ್ಕೆ ಒತ್ತು ನೀಡಿದ ಅವರು, ನಂತರ ರನ್ ಗಳಿಕೆಯ ವೇಗ ಹೆಚ್ಚಿಸಿದರು. 131 ಎಸೆತಗಳಲ್ಲಿ 13 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳ ನೆರವಿನಿಂದ ಶತಕ ಪೂರೈಸಿದರು. ಇದು ಅವರ ಅಂಡರ್-19 ಏಕದಿನ ವೃತ್ತಿಜೀವನದ ಮೊದಲ ಶತಕವಾಗಿದೆ.ಪಾಕಿಸ್ತಾನ ವಿರುದ್ಧದ ಹಿಂದಿನ ಪಂದ್ಯದಲ್ಲಿ ಆರ್ಯವೀರ್ ಕೇವಲ 22 ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಆದರೆ ಯುಎಇ ವಿರುದ್ಧದ ಪಂದ್ಯದಲ್ಲಿ ಜವಾಬ್ದಾರಿಯುತ ಆಟವಾಡುವ ಮೂಲಕ ಅದಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಈ ಪಂದ್ಯದಲ್ಲಿ ಭಾರತಕ್ಕೆ ಗೆಲುವು ಅನಿವಾರ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳುವ ಆತಂಕವಿತ್ತು. ಭಾರತದ ನಾಯಕ ಲಕ್ಷ್ಯ ರಾಜೇಶ್ ರಾಯಚಂದಾನಿ 17 ರನ್ ಗಳಿಸಿ ಔಟಾದರೂ, ಆರ್ಯವೀರ್ ತಮ್ಮ ಏಕಾಗ್ರತೆ ಕಳೆದುಕೊಳ್ಳಲಿಲ್ಲ. ವಿಕೆಟ್ ಪತನದ ಬಳಿಕವೂ ಎಚ್ಚರಿಕೆಯಿಂದ ಬ್ಯಾಟಿಂಗ್ ಮುಂದುವರಿಸಿ ಶತಕದ ಗಡಿ ತಲುಪಿದರು.ಶತಕ ಪೂರ್ಣಗೊಳಿಸಿದ ಬಳಿಕವೂ ಆರ್ಯವೀರ್ ತಮ್ಮ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರಿಸಿದರು. ಅವರು ಆಡಿದ 168 ಎಸೆತಗಳಲ್ಲಿ 7 ಸಿಕ್ಸರ್ ಹಾಗೂ 17 ಬೌಂಡರಿಗಳೊಂದಿಗೆ 160 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಭಾರತ ತಂಡ ದೊಡ್ಡ ಮೊತ್ತವನ್ನು ಕಲೆ ಹಾಕಲು ಸಾಧ್ಯವಾಯಿತು. ಇವರ ಜೊತೆಗೆ ವಿಕೆ ವಿನೀತ್ 69 ಎಸೆತಗಳಲ್ಲಿ 67 ರನ್‌ಗಳನ್ನು ಕಲೆ ಹಾಕಿದರು. ಅಂತಿಮವಾಗಿ ಭಾರತ ತಂಡ, 50 ಓವರ್‌ಗಳಿಗೆ 7 ವಿಕೆಟ್‌ಗಳ ನಷ್ಟಕ್ಕೆ 309 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಯುಎಇಗೆ 310 ರನ್‌ಗಳ ಗುರಿಯನ್ನು ನೀಡಿದೆ.
ಸಂಬಂಧಿತ ಸುದ್ದಿಗಳು

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಮಹಿಳಾ ತಂಡ ಪ್ರಕಟ : ಮೂರೂ ಮಾದರಿಗೆ ಸ್ಮೃತಿ ಮಂಧಾನ ನಾಯಕಿ!
ನವದೆಹಲಿ: ಡಿಸೆಂಬರ್ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪೂರ್ಣ ಪ್ರಮಾಣದ ಸರಣಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳ…
◷ 10/11/2026
ಯಶಸ್ವಿ ಜೈಸ್ವಾಲ್ ಬದಲಿಗೆ ಪೂರನ್, ರಾಜಸ್ಥಾನದ 3 ಆಟಗಾರರು ಲಕ್ನೋಗೆ!
ನವದೆಹಲಿ : ಐಪಿಎಲ್ 2027ರ ಹರಾಜಿಗೂ ಮುನ್ನ ಟ್ರೇಡ್ ವಿಂಡೋ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಈಗಾಗಲೇ ಹಲವು ಪ್ರಮುಖ ಆಟಗಾರರ…
◷ 09/11/2026
ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ 4 ರನ್ ಗಳ ರೋಚಕ ಗೆಲುವು
ನವದೆಹಲಿ : ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಡಕ್ವರ್ತ್ ಲೂಯಿಸ್ ನಿಯಮದಡಿ ನ್ಯೂಜಿಲೆಂಡ್ ವಿರುದ್ಧ 4 ರನ್ ಗಳ ರೋಚಕ ಗೆಲುವು ಸ…
◷ 07/11/2026
ಟೆಸ್ಟ್ ಕ್ರಿಕೆಟ್ಗೆ ಮಹಮ್ಮದ್ ಶಮಿ ವಿದಾಯ
ನವದೆಹಲಿ : ಭಾರತ ಕ್ರಿಕೆಟ್ ತಂಡದ ಅನುಭವಿ ವೇಗದ ಬೌಲರ್ ಮಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ. ಶುಕ…
◷ 07/11/2026
