ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ ಯುಜ್ವೇಂದ್ರ ಚಹಲ್

ಇಂದೋರ್ : ಭಾರತದ ಅನುಭವಿ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಟಿ20 ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಚುಟುಕು ಕ್ರಿಕೆಟ್ ಮಾದರಿಯಲ್ಲಿ 400 ವಿಕೆಟ್‌ಗಳನ್ನು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಎಲೀಟ್ 2026ರ ಬಿ-ಗುಂಪಿನ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಚಹಲ್ ಈ ಸಾಧನೆ ಮಾಡಿದರು. ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ ಅವರು ಕೇವಲ 16 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದರು. ಚಹಲ್ ಅವರ ಈ ಮಾರಕ ಬೌಲಿಂಗ್ ನೆರವಿನಿಂದ ಹರಿಯಾಣ ತಂಡವು ತಮಿಳುನಾಡನ್ನು 7 ವಿಕೆಟ್‌ಗಳಿಂದ ಮಣಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ.ಯುಜ್ವೇಂದ್ರ ಚಹಲ್ ಇದುವರೆಗೆ ಆಡಿರುವ 346 ಟಿ20 ಪಂದ್ಯಗಳಿಂದ ಒಟ್ಟು 402 ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅತಿ ಹೆಚ್ಚು ಟಿ20 ವಿಕೆಟ್ ಪಡೆದ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ಭುವನೇಶ್ವರ್ ಕುಮಾರ್ (366 ವಿಕೆಟ್) ಎರಡನೇ ಸ್ಥಾನದಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ (354 ವಿಕೆಟ್) ಮೂರನೇ ಸ್ಥಾನದಲ್ಲಿದ್ದಾರೆ. ಪಿಯೂಷ್ ಚಾವ್ಲಾ (329) ಮತ್ತು ರವಿಚಂದ್ರನ್ ಅಶ್ವಿನ್ (323) ನಂತರದ ಸ್ಥಾನಗಳಲ್ಲಿದ್ದಾರೆ.
ಸಂಬಂಧಿತ ಸುದ್ದಿಗಳು

ಸಿಎಸ್ ಕೆ ಟೀಮ್ ಮೆಂಟರ್ ಆಗಿ ಧೋನಿ!
ಚೆನ್ನೈ : ಇಂಡಿಯನ್ ಪ್ರೀಮಿಯರ್ ಲೀಗ್ ನಿಂದ ಕ್ರಿಕೆಟಿಗ ಎಂ.ಎಸ್. ಧೋನಿ ನಿವೃತ್ತರಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಹೊ…
◷ 17/11/2026
ಏಷ್ಯನ್ ಪ್ಯಾರಾ ಗೇಮ್ಸ್ ಚಿನ್ನದ ಪದಕ ವಿಜೇತೆ ಸೌಮ್ಯಗೆ ಸನ್ಮಾನ
ಬೆಂಗಳೂರು : ಏಷ್ಯನ್ ಪ್ಯಾರಾ ಗೇಮ್ಸ್ನ ಮಹಿಳೆಯರ ಟಿ12/ಟಿ13 (T12/T13) ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕರ್ನಾಟಕಕ್ಕೆ ಕ…
◷ 17/11/2026
ಬಾಲಕಿ ಎಸೆದ ಚೆಂಡಿಗೆ ಕ್ಲೀನ್ ಬೌಲ್ಡ್ ಆದ ಬ್ರಿಟನ್ ರಾಜಕುಮಾರ !
ಮುಂಬೈ: ಬ್ರಿಟನ್ ರಾಜಕುಮಾರ ವಿಲಿಯಂ ಅವರು ಸ್ಥಳೀಯ ಬಾಲಕಿಯೊಬ್ಬಳು ಎಸೆದ ಚೆಂಡಿಗೆ ರಾಜಕುಮಾರ ವಿಲಿಯಂ ಕ್ಲೀನ್ ಬೌಲ್ಡ್ ಆದರು. ರಾಜಕು…
◷ 16/11/2026
ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಮರು ಆಯ್ಕೆ ; ವಿಶ್ವಾಸ ಮತ್ತು ಬೆಂಬಲಕ್ಕೆ ಕೃತಜ್ಞತೆ ಸಲ್ಲಿಕೆ
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷರಾಗಿ ಜಯ್ ಶಾ ಅವರು ಎರಡನೇ ಅವಧಿಗೆ ಅವಿರೋಧವಾಗಿ ಮತ್ತು ಸರ್ವಾನು…
◷ 16/11/2026
