ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇಬ್ಬರಿಗೆ ಗಾಯ!
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ..

ನವದೆಹಲಿ: ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಅಕ್ಟೋಬರ್ 31ರ ರಾತ್ರಿ 9.30ರ ಸುಮಾರಿಗೆ ಕಾರ್ಖಾನೆಯ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಮೂರನೇ ಮಹಡಿಯವರೆಗೂ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಘಟನೆ ವೇಳೆ ಕಾರ್ಖಾನೆಯಲ್ಲಿದ್ದ 20ರಿಂದ 25 ಮಂದಿಯಲ್ಲಿ ಬಹುತೇಕರು ಹೊರಬಂದಿದ್ದಾರೆ. ಆರು ಮಂದಿ ಒಳಗೆ ಸಿಲುಕಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾದರಕ್ಷೆ ತಯಾರಿಕೆಗೆ ಬಳಸುವ ರಾಸಾಯನಿಕಗಳಿಂದ ಬೆಂಕಿ ವೇಗವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ.
ಸಂಬಂಧಿತ ಸುದ್ದಿಗಳು

ಅಗತ್ಯ ವಸ್ತುಗಳ ಬೆಲೆ ಇಳಿಸಿ, ಇಲ್ಲವೇ ಅಧಿಕಾರ ಬಿಟ್ಟು ತೊಲಗಿ: ಶೋಭಾ ಕರಂದ್ಲಾಜೆ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್…
◷ 02/11/2026
2028ರ ವಿಧಾನಸಭೆ ಚುನಾವಣೆ ಗುರಿ: ಈಗಿನಿಂದಲೇ ಸಿದ್ಧತೆ ಆರಂಭಿಸಲು ಬಿಜೆಪಿ ಮುಖಂಡರಿಗೆ ಹರೀಶ್ ದ್ವಿವೇದಿ ಸೂಚನೆ
ಬೆಂಗಳೂರು: ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತ…
◷ 02/11/2026
ನಂದಿನಿ ಮೊಸರು ಪ್ರತಿ ಲೀಟರ್ಗೆ 2 ರೂ. ಇಳಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ
ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮುಖ್…
◷ 02/11/2026
ಹಾಸನಾಂಬೆ ದರ್ಶನಕ್ಕೆ 8 ಲಕ್ಷ ಭಕ್ತರು: 6.50 ಕೋಟಿ ರೂ. ಆದಾಯ
ನ.6ಕ್ಕೆ ಸಿದ್ದರಾಮಯ್ಯ, ನ.8ಕ್ಕೆ ಡಿಕೆಶಿ ಭೇಟಿ
◷ 02/11/2026
