ಮಂಗಳೂರು (ದಕ್ಷಿಣ ಕನ್ನಡ): ರಾಜ್ಯ ಸಚಿವ ಸಂಪುಟದ ಮುಂದಿನ ಸಭೆ ಬಿಜಾಪುರದಲ್ಲಿ ನಡೆಯಲಿದೆ. ಬಳಿಕ ಮಂಗಳೂರಿನಲ್ಲಿ ಸಭೆ ನಡೆಯಲಿದೆ. ಈ ಸಂದರ್ಭ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಿಲ್ಲೆಯ ಅಗತ್ಯ ಬೇಡಿಕೆಗಳ ಕುರಿತಂತೆ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಸ್ಪೀಕರ್ ಯು.ಟಿ. ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಕುರಿತಂತೆ ಈಗಾಗಲೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿದೆ ಎಂದರು.
ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗಣಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಉಸ್ತುವಾರಿ ಸಚಿವರು ಸೇರಿದಂತೆ ಸಭೆ ನಡೆದಿದೆ. ಸ್ಥಳೀಯ ಜನಪ್ರತಿನಿಧಿಗಳಿಂದ ಅಭಿಪ್ರಾಯ ನೀಡಲಾಗಿದೆ. ಅಗತ್ಯ ಮೂಲಭೂತ ಸೌಲಭ್ಯ ಒದಗಿಸಬೇಕಾಗಿದೆ. ಕೈಗಾರಿಕಾ ವಲಯ ಅಭಿವೃದ್ಧಿ ಸೇರಿದಂತೆ ಅಗತ್ಯ ಕ್ರಮ ಆಗಬೇಕಾಗಿದೆ ಎಂದರು.