ತುಮಕೂರು : ತ್ರಿವಿಧ ದಾಸೋಹಿ ತುಮಕೂರಿನ ಲಿಂಗೈಕ್ಯ ಪೂಜ್ಯ ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತ್ಯೋತ್ಸವ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದರು.
ಶ್ರೀಗಳ ಗದ್ದುಗೆ ದರ್ಶನ ಪಡೆದು ಹೊರ ಬರುವಾಗ ಬಿಜೆಪಿ ಕಾರ್ಯಕರ್ತರು ಮುಂದಿನ ಸಿಎಂ ವಿಜಯೇಂದ್ರ ಸಿದ್ದಗಂಗಾ ಮಠದಲ್ಲಿ ಯುವ ಮೋರ್ಚಾ ಕಾರ್ಯಕರ್ತರಿಂದ ಘೋಷಣೆ ಕೂಗಲಾಯಿತು. ಈ ವೇಳೆ ಸುಮ್ಮನೆ ಇರುವಂತೆ ಕಾರ್ಯಕರ್ತರಿಗೆ ತಾಕೀತು ಮಾಡಿದರು. ಶ್ರೀಗಳ ಗದ್ದುಗೆ ಪೂಜೆ ಸಲ್ಲಿಸಿ ವಾಪಸ್ ಆಗುವ ವೇಳೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.