Thursday, April 10, 2025
Google search engine

Homeರಾಜ್ಯಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಅನಂತ ಧನ್ಯವಾದಗಳು: ಸಿಎಂ ಸಿದ್ಧರಾಮಯ್ಯ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಅನಂತ ಧನ್ಯವಾದಗಳು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಶನಿವಾರ ೩ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ.

ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

RELATED ARTICLES
- Advertisment -
Google search engine

Most Popular