Sunday, April 20, 2025
Google search engine

HomeUncategorizedರಾಷ್ಟ್ರೀಯಪಿಎಫ್ ಐ ವಿರುದ್ಧ 6 ರಾಜ್ಯಗಳಲ್ಲಿ ಎನ್‌ ಐಎ ದಾಳಿ

ಪಿಎಫ್ ಐ ವಿರುದ್ಧ 6 ರಾಜ್ಯಗಳಲ್ಲಿ ಎನ್‌ ಐಎ ದಾಳಿ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ ಐ) ವಿರುದ್ಧ ಶೋಧ ಕಾರ್ಯ ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ ಐಎ) ಇಂದು ಆರು ರಾಜ್ಯಗಳಲ್ಲಿ ಸಂಘಟನೆಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದೆ.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ಭೇಟಿ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲು ಪಿಎಫ್‌ಐ ಸಂಚು ರೂಪಿಸಿತ್ತು ಎಂದು ಆರೋಪಿಸಿ ಪಾಟ್ನಾದ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದೀಗ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸಿಬಿಐ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ತಮಿಳುನಾಡಿನಲ್ಲಿ ಶೋಧ ಕಾರ್ಯ ನಡೆಸಿದೆ.

ಕಾನೂನು ಬಾಹಿರ ಚಟುವಟಿಕೆಗಳ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಿಷೇಧಿಸಿ ಆದೇಶ ಹೊರಡಿಸಿತ್ತು. ಆ ವೇಳೆ ಸಂಘಟನೆಯ ಹಲವು ಪ್ರಮುಖರನ್ನು ಬಂಧಿಸಲಾಗಿತ್ತು.

RELATED ARTICLES
- Advertisment -
Google search engine

Most Popular