ಶ್ರೀನಗರ: ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಜಮ್ಮು-ಕಾಶ್ಮೀರದ ಅನೇಕ ಕಡೆ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ಬಂಡೀಪುರ , ಕುಲ್ಗಾಮ್, ಪುಲ್ವಾಮ, ಸೋಫಿಯಾ ಸೇರಿದಂತೆ 6ಕ್ಕೂ ಹೆಚ್ಚು ಕಡೆ ತನಿಖಾಕಾರಿಗಳು ದಾಳಿ ನಡೆಸಿದ್ದಾರೆ.
ಭಯೋತ್ಪಾದನಾ ಪ್ರಕರಣಗಳಲ್ಲಿ ಕೆಲವು ಸ್ಥಳೀಯರು ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳಿಗೆ ಹಣಕಾಸಿನ ನೆರವು ಹಾಗೂ ನೈತಿಕ ಬೆಂಬಲ ಸೂಚಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ಹಲವು ತಿಂಗಳಿನಿಂದ ಜಮ್ಮು-ಕಾಶ್ಮೀರದಲ್ಲಿ ಎನ್‍ಐಎ ಅಧಿಕಾರಿಗಳು ನಿರಂತರವಾಗಿ ದಾಳಿ ನಡೆಸುತ್ತಲೇ ಇದ್ದಾರೆ. ಭಯೋತ್ಪಾದಕರಿಗೆ ಕುಮ್ಮಕ್ಕು ನೀಡಿರುವುದು ಸೇರಿದಂತೆ ಹಲವು ಪ್ರಕರಣಗಳಲ್ಲಿ ನಿರಂತರವಾಗಿ ದಾಳಿ ನಡೆಯುತ್ತಲೇ ಇದೆ.