ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ ೧೪ ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ.
ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ೧೪ ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ.