ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಇಂದು ಮಾರ್ಚ್ ೧೪ರಂದು ಸಂಜೆ ೪.೩೦ ಗಂಟೆಗೆ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್. ಭಾರತಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲೋಕಪ್ಪ. ಎನ್.ಆರ್. ಬಹುಮಾನ ವಿತರಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂಪಕ, ನಿವೇದಿತಾ.ಎನ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ. ವಿರೂಪಾಕ್ಷಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.