Friday, April 11, 2025
Google search engine

Homeವಿದೇಶನಿಜ್ಜರ್ ಹತ್ಯೆ ಪ್ರಕರಣ: ಕೆನಡಾ ಮೊದಲು ಪುರಾವೆ ಕೊಡಲಿ ಎಂದ ಎಸ್.ಜೈಶಂಕರ್

ನಿಜ್ಜರ್ ಹತ್ಯೆ ಪ್ರಕರಣ: ಕೆನಡಾ ಮೊದಲು ಪುರಾವೆ ಕೊಡಲಿ ಎಂದ ಎಸ್.ಜೈಶಂಕರ್

ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿ ಹೋರಾಟಗಾರ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಆರೋಪಗಳಿಗೆ ಕೆನಡಾ ಸರ್ಕಾರ ಪುರಾವೆಗಳನ್ನು ಒದಗಿಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಒತ್ತಾಯಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ‘ಒಂದು ಬಿಲಿಯನ್ ಜನರು ಜಗತ್ತನ್ನು ಹೇಗೆ ನೋಡುತ್ತಾರೆ’ ಎಂಬ ಶೀರ್ಷಿಕೆಯ ಕಾರ್ಯಕ್ರಮದಲ್ಲಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಐದು ದಿನಗಳ ಅಧಿಕೃತ ಭೇಟಿಗಾಗಿ ಬ್ರಿಟನ್’ಗೆ ಜೈಶಂಕರ್ ಅವರು ತೆರಳಿದ್ದು, ಈ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕೆನಡಾ ಆರೋಪ ಕುರಿತು ಸ್ಪಷ್ಟನೆ ನೀಡಿದ್ದಾರೆ.

‘ನೀವು ಅಂತಹ ಆರೋಪ ಮಾಡಲು ನಿಖರ ಕಾರಣವಿದ್ದರೆ ದಯವಿಟ್ಟು ಸಾಕ್ಷ್ಯವನ್ನು ಹಂಚಿಕೊಳ್ಳಿ ಏಕೆಂದರೆ ನಾವು ತನಿಖೆಯನ್ನು ನಿರಾಕರಿಸುತ್ತಿಲ್ಲ’ ಆದರೆ ಕೆನಡಾ ತನ್ನ ಆರೋಪವನ್ನು ಬೆಂಬಲಿಸಲು ಭಾರತದೊಂದಿಗೆ ಯಾವುದೇ ಪುರಾವೆಗಳನ್ನು ಹಂಚಿಕೊಂಡಿಲ್ಲ ಎಂದು ಹೇಳಿದರು.

ಇದೇ ವೇಳೆ ಕೆನಡಾದಲ್ಲಿನ ಖಲಿಸ್ತಾನ್ ಪರ ಚಟುವಟಿಕೆಗಳನ್ನು ಉಲ್ಲೇಖಿಸಿದ ಜೈಶಂಕರ್ ಅವರು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಒಂದು ನಿರ್ದಿಷ್ಟ ಜವಾಬ್ದಾರಿಯೊಂದಿಗೆ ಬರುತ್ತದೆ ಮತ್ತು ಆ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದು ಮತ್ತು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗವನ್ನು ಸಹಿಸಿಕೊಳ್ಳುವುದು ತುಂಬಾ ತಪ್ಪು ಎಂದು ಹೇಳಿದರು.

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌  ಹತ್ಯೆ ಕುರಿತ ತನಿಖೆಗೆ ಭಾರತ ಸಹಕರಿಸುತ್ತದೆ. ಆದರೆ, ಭಾರತದ ವಿರುದ್ಧ ಕೆನಡಾ ಮಾಡಿದ ಆರೋಪಗಳಿಗೆ ಮೊದಲು ಸಾಕ್ಷ್ಯ ಕೊಡಲಿ ಎಂದು ಆಗ್ರಹಿಸಿದರು.

“ಭಾರತದ ವಿರುದ್ಧ ಕೆನಡಾ ಗಂಭೀರ ಆರೋಪಗಳನ್ನು ಮಾಡಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದೆ. ಕೆನಡಾ ಆರೋಪಗಳ ಕುರಿತ ತನಿಖೆಗೆ ಭಾರತ ಸಿದ್ಧವಾಗಿದೆ. ನಾವು ತನಿಖೆಯಿಂದ ದೂರ ಸರಿಯುವ, ಸಹಕರಿಸದಿರುವ ಮಾತೇ ಇಲ್ಲ. ಆದರೆ, ನಾವು ಕೆನಡಾ ಸರ್ಕಾರಕ್ಕೆ ಸಾಕ್ಷ್ಯ ಕೊಡಿ ಎಂದು ಮಾತ್ರ ಕೇಳಿದ್ದೇವೆ. ಸಾಕ್ಷ್ಯವಿಲ್ಲದೆ ತನಿಖೆ ನಡೆಯುವುದು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

 “ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ. ಭಾರತದ ಹೈಕಮಿಷನ್‌ ಮೇಲೆ ದಾಳಿ ನಡೆಸಲಾಗುತ್ತಿದೆ. ಹೀಗಿರುವಾಗ ಸಹಜವಾಗಿಯೇ ಭಾರತವು ಕ್ರಮಕ್ಕೆ ಆಗ್ರಹಿಸುತ್ತದೆ. ಆದರೆ, ಕೆನಡಾ ರಾಜಕೀಯದಲ್ಲಿ ಹಿಂಸಾತ್ಮಕ ಮನೋಭಾವದ ವ್ಯಕ್ತಿಗಳು ಬಂದು ಸೇರಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ ಎಂದರು.

RELATED ARTICLES
- Advertisment -
Google search engine

Most Popular