Friday, April 4, 2025
Google search engine

Homeರಾಜಕೀಯಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಬೃಹತ್ ರೋಡ್ ಶೋ

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಬೃಹತ್ ರೋಡ್ ಶೋ

ಚನ್ನಪಟ್ಟಣ: ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋಲನುಭವಿಸಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಇದೀಗ ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇಂದು ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು ಇದಕ್ಕೂ ಮುನ್ನ ಬೃಹತ್ ರೋಡ್ ಶೋ ನಡೆಸಿದ್ದಾರೆ. ಮೆರವಣಿಗೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವಥ್ ನಾರಾಯಣ್, ಮಾಜಿ ಕೇಂದ್ರ ಸಚಿವ ಸದಾನಂದಗೌಡ ಸೇರಿ ಘಟಾನುಘಟಿ ನಾಯಕರು ಸಾಥ್ ನೀಡಿದ್ದಾರೆ.

ನಾಮಪತ್ರ ಸಲ್ಲಿಸಲು ಅದ‍್ಧೂರಿ ಮೆರವಣಿಗೆ ಮೂಲಕ ನಿಖಿಲ್ ಕುಮಾರಸ್ವಾಮಿ ತೆರಳುತ್ತಿದ್ದು ಜನಸಾಗರ ಹರಿದು ಬಂದಿದೆ. ಶೇರ್ವಾ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ಜನರು ಜಮಾಯಿಸಿದ್ದಾರೆ ಎನ್ನಲಾಗಿದೆ. ಇನ್ನು ಮೈತ್ರಿ ನಾಯಕರ ಮೆರವಣಿಗೆಗೆ ಕಲಾತಂಡಗಳು ಮೆರುಗು ತಂದಿವೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಈಗಾಗಲೇ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ಚನ್ನಪಟ್ಟಣ ಉಪಚುನಾವಣೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದೆ.

RELATED ARTICLES
- Advertisment -
Google search engine

Most Popular