ಬೆಂಗಳೂರು: ಮುಂಬರುವ ೨೦೨೪ರ ಲೋಕಸಭೆ ಚುನಾವಣೆಗೆ ಇದಾಗಲೇ ಪಕ್ಷಗಳು ಕಸರತ್ತು ನಡೆಸುತ್ತಿದೆ. ನಿಮಗೆ ತಿಳಿದಿರುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ೨೦೨೩ ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಆದರೆ ಇದೀಗ ಲೋಕಸಭೆ ಎಲೆಕ್ಷನ್ ಗುರಿ ಸಾಧಿಸಲು ನಿಖಿಲ್ ಪಣ ತೊಟ್ಟಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ಇವರ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣೆ ಹಿನ್ನೆಲೆ ಚುರುಕುಗೊಂಡಿರುವ ನಾಯಕ ನಟ ಈ ಹಿಂದೆ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಸಿಎಂ ಆದಿತ್ಯನಾಥ್ ಅವರಿಗೆ ಶ್ರೀರಾಮ, ಸೀತೆ, ಲಕ್ಷ್ಮಣ, ಆಂಜನೇಯನಿರುವ ಒಂದು ವಿಗ್ರಹ ನೀಡಿ ಶಾಲು ಹೋದಿಸಿ ಗೌರವಿಸಿದ್ದಾರೆ.
ಈ ಕುರಿತು ಸ್ವತಃ ನಿಖಿಲ್ ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಭೇಟಿ ಕುರಿತು ಬರೆದಿಕೊಂಡಿರುವ ಅವರು ಸಂತಸ ವ್ಯಕ್ತಪಡಿಸಿದ್ದಾರೆ.