ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ೧೧೫೫ ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರಿಗೆ ಹಿನ್ನಡೆಯಾಗಿದೆ. ಶಿಗ್ಗಾಂವಿಯಲ್ಲಿ ನಡೆದ ನಾಲ್ಕನೇ ಸುತ್ತಿನ ಮತ ಎಣಿಕೆ ಪ್ರಕ್ರಿಯೆಯಲ್ಲೂ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗಿಂತ ಭರತ್ ಬೊಮ್ಮಾಯಿ ೧,೫೬೭ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಸಂಡೂರಿನಲ್ಲಿ ಐದು ಸುತ್ತುಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಇನ್ನು ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರು ಹಿನ್ನಡೆ ಸಾಧಿಸಿದ್ದಾರೆ.