Friday, April 4, 2025
Google search engine

Homeರಾಜ್ಯಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ನೆನಪಿನಲ್ಲಿ ದತ್ತಿ ನಿಧಿ ಸ್ಥಾಪಿಸಲು ನಿರ್ಮಲಾನಂದ ಸ್ವಾಮೀಜಿ ಇಂಗಿತ

ಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ನೆನಪಿನಲ್ಲಿ ದತ್ತಿ ನಿಧಿ ಸ್ಥಾಪಿಸಲು ನಿರ್ಮಲಾನಂದ ಸ್ವಾಮೀಜಿ ಇಂಗಿತ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ.

ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಜೊತೆಗೆ ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ನೆನಪಿನಲ್ಲಿ ಚುಂಚಶ್ರೀ ಪ್ರಶಸ್ತಿ ಸ್ಥಾಪಿಸಲು 10ಲಕ್ಷ ರೂ ಠೇವಣಿ ಇಡುವುದಾಗಿ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸ್ವಾಗತಿಸುತ್ತದೆ.

ನಿರ್ಮಲಾನಂದನಾಥ‌ ಸ್ವಾಮೀಜಿ ಅವರ ಆಶಯದಂತೆ ಠೇವಣಿ ಇಟ್ಟ ಬಳಿಕ ಪ್ರತಿ ವರ್ಷವೂ ಸಮ್ಮೇಳನದಲ್ಲಿ ಸಾಧಕ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular