Friday, April 10, 2026
Google search engine

Homeದೇಶರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

ಪಾಟ್ನಾ: ಇಂದು ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ರಾಜ್ಯ ಸರ್ಕಾರದಿಂದ ಅವರು ಹೊರಬರುವ ಸೂಚನೆಯಾಗಿದ್ದು, ಬಿಹಾರದಲ್ಲಿ (Bihar) ಹೊಸ ಸರ್ಕಾರ ರಚನೆಗೆ ನಾಂದಿಯಾಡಿದ್ದಾರೆ.

ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಹಾರ ಉಪಮುಖ್ಯಮಂತ್ರಿಗಳಾದ ವಿಜಯ್ ಕುಮಾರ್ ಸಿನ್ಹಾ ಮತ್ತು ಸಾಮ್ರಾಟ್ ಚೌಧರಿ ಭಾಗವಹಿಸಿದ್ದರು. 

ಹೊಸ ಹುದ್ದೆ ವಹಿಸಿಕೊಳ್ಳುವ ಒಂದು ದಿನ ಮೊದಲು ನಿತೀಶ್ ಕುಮಾರ್ ದೆಹಲಿಗೆ ಭೇಟಿ ನೀಡಿ, ಶೀಘ್ರದಲ್ಲೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಸ್ಟಷ್ಟ ಪಡಿಸಿದ್ದರು. ಬಿಹಾರದಲ್ಲಿ ನನ್ನ ಹೆಚ್ಚಿನ ಕೆಲಸವನ್ನು ಪೂರ್ಣಗೊಳಿಸಿದ್ದೇನೆ. ಈಗ ದೆಹಲಿಯಲ್ಲಿ ನನ್ನ ಜವಾಬ್ದಾರಿಗಳತ್ತ ಗಮನಹರಿಸಲು ಮುಂದಾಗಬೇಕು ಎಂದು ತಿಳಿಸಿದ್ದರು. ನಾನು ಅಲ್ಲಿನ ಸಿಎಂ ಸ್ಥಾನದಿಂದ ಕೆಳಗಿಳಿದು ಇಲ್ಲಿ ಕೆಲಸ ಮಾಡುತ್ತೇನೆ ಎಂದು ನಿತೀಶ್‌ ತಿಳಿಸಿದ್ದಾರೆ. ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ನಾನು ರಾಜೀನಾಮೆ ನೀಡುತ್ತೇನೆ. ಬೇರೆಯವರಿಗೆ ಬಿಹಾರ ಸಿಎಂ ಸ್ಥಾನ ನೀಡಲಾಗುವುದು ಎಂದು ನಿತೀಶ್‌ ಕುಮಾರ್‌ ಹೇಳಿದ್ದರು.

ನಿತೀಶ್ ಕುಮಾರ್ ಬಿಹಾರದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿದ್ದು, 1985 ರಲ್ಲಿ ಶಾಸಕರಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. ನಂತರ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2005 ರಲ್ಲಿ ಮೊದಲ ಬಾರಿಗೆ ನಿತೀಶ್‌ ಕುಮಾರ್‌ ಬಿಹಾರದ ಮುಖ್ಯಮಂತ್ರಿಯಾದರು. ಅವರು ದೇಶದ ಅತ್ಯಂತ ಅನುಭವಿ ಮತ್ತು ಹಿರಿಯ ರಾಜಕೀಯ ನಾಯಕರಲ್ಲಿ ಒಬ್ಬರು. 

RELATED ARTICLES
- Advertisment -
Google search engine

Most Popular