Saturday, March 7, 2026
Google search engine

Homeರಾಜಕೀಯಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು, ಈ ಮೂಲಕ ಬಜೆಟ್‌ನಲ್ಲಿ ಸಾಲದ ಹೆಚ್ಚಳ ಕುರಿತು ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಲದ ಮಿತಿಯನ್ನು ಕರ್ನಾಟಕ ಹಣಕಾಸಿನ ಜವಾಬ್ದಾರಿ ಕಾಯ್ದೆ ನಿಯಮಗಳೊಳಗೆ ಇಟ್ಟುಕೊಂಡೇ ಬಜೆಟ್ ಮಂಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಲ್ಲದೆ ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ಸಾಲವು ಸುಮಾರು 165 ಲಕ್ಷ ಕೋಟಿ ರೂ. ಆಗಿದೆ. ಈ ವರ್ಷದ ಕೇಂದ್ರ ಸರ್ಕಾರದ ಹಣಕಾಸು ಕೊರತೆ ಶೇ.4.4 ಆಗಿದ್ದು, ಒಟ್ಟು ಸಾಲ 218 ಲಕ್ಷ ಕೋಟಿ ರೂ. ಆಗಿದೆ ಎಂದು ಹೇಳಿದರು. 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಸಾಲ 53.11 ಲಕ್ಷ ಕೋಟಿ ರೂ. ಇತ್ತು. ಈಗ ಅದು 165 ಲಕ್ಷ ಕೋಟಿ ರೂ. ಆಗಿದೆ.

“ಕೇಂದ್ರದಿಂದ ರಾಜ್ಯಕ್ಕೆ ನೀಡಬೇಕಾದ ಅನುದಾನ ಸಂಪೂರ್ಣವಾಗಿ ಬಂದಿದ್ದರೆ ರಾಜ್ಯದಲ್ಲಿ ಆದಾಯ ಕೊರತೆ ಉಂಟಾಗುತ್ತಿರಲಿಲ್ಲ. ಟೀಕೆ ಮಾಡುವುದು ಸುಲಭ, ಹೀಗಾಗಿ ನಮ್ಮನ್ನು ಪ್ರಶ್ನಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಒಟ್ಟು ಸಾಲ 55,33,847 ಕೋಟಿ ರೂ. ಇತ್ತು ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದ ಆರ್ಥಿಕ ಪ್ರಗತಿಯನ್ನು ಉಲ್ಲೇಖಿಸಿದ ಅವರು, 2025–26ರಲ್ಲಿ ಕರ್ನಾಟಕದ GSDP ವೃದ್ಧಿ ದರ ಶೇ.8.1 ಆಗಿದ್ದು, ದೇಶದ GDP ವೃದ್ಧಿದರ ಶೇ.7.4 ಕ್ಕಿಂತ ಹೆಚ್ಚಾಗಿದೆ.

RELATED ARTICLES
- Advertisment -
Google search engine

Most Popular