Friday, April 11, 2025
Google search engine

Homeರಾಜ್ಯರಾಜ್ಯದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿ.ಕೆ. ಶಿವಕುಮಾರ್ ಭರವಸೆ

ರಾಜ್ಯದಲ್ಲಿ ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿ.ಕೆ. ಶಿವಕುಮಾರ್ ಭರವಸೆ

ಹುಬ್ಬಳ್ಳಿ: ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ೨೦೧೯ಕ್ಕೂ ಮೊದಲು ಬಿಜೆಪಿ. ನೋಟೀಸ್ ನೀಡಿದ್ದು, ಈಗ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಜೆಪಿಸಿ ರಾಜ್ಯದ ವಿಚಾರದಲ್ಲಿ ಭೇಟಿ ನೀಡುವ ಅಧಿಕಾರವಿಲ್ಲ. ಕೇವಲ ರಾಜಕೀಯ ಉದ್ದೇಶದಿಂದ ಭೇಟಿ ನೀಡುತ್ತಿದ್ದು ಈ ಸಮಿತಿಗೆ ಅಧಿಕೃತ ಮಾನ್ಯತೆ ಇಲ್ಲ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular