ನವದೆಹಲಿ: ನನಗೆ ಸ್ವಲ್ಪವೂ ಆತಂಕವಿಲ್ಲ. ವಯನಾಡ್ ಪ್ರತಿನಿಧಿಸಲು ಸಾಧ್ಯವಾಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ವಯನಾಡ್ ಜನತೆ ರಾಹುಲ್ ಅನುಪಸ್ಥಿತಿಯನ್ನು ಅನುಭವಿಸಲು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಪುತ್ರಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ
ಸಹೋದರ ರಾಹುಲ್ ಗಾಂಧಿ ಅವರಿಂದ ತೆರವಾಗಿರುವ ವಯನಾಡ್ ಉಪ ಚುನಾವಣೆ ಮೂಲಕ ಚೊಚ್ಚಲ ಚುನಾವಣೆ ಎದುರಿಸಲು ಪ್ರಿಯಾಂಕಾ ಗಾಂಧಿ ವಾದ್ರಾ ಸಜ್ಜಾಗಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ೨೦೧೯ ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದಾಗಿನಿಂದ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎದುರಾಳಿಯಾಗುವ ಸಾಧ್ಯತೆ ಹಾಗೂ ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲ್ಪಟ್ಟಿದ್ದರು.ಆದರೆ, ಅದು ಆಗಿರಲಿಲ್ಲ. ಇದೀಗ ಅವರ ಸಹೋದರ ರಾಹುಲ್ ಗಾಂಧಿ ಸತತ ಎರಡನೇ ಅವಧಿಗೆ ಗೆದ್ದಿರುವ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.
ರಾಯ್ ಬರೇಲಿಯಲ್ಲಿಯೂ ಉತ್ತಮ ಸಂಬಂಧವನ್ನು ಹೊಂದಿದ್ದೇನೆ. ಏಕೆಂದರೆ, ೨೦ ವರ್ಷಗಳಿಂದ ಅಲ್ಲಿ ಕೆಲಸ ಮಾಡಿದ್ದೇನೆ ಮತ್ತು ಆ ಸಂಬಂಧವು ಎಂದಿಗೂ ಮುರಿಯುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.