Monday, April 21, 2025
Google search engine

Homeರಾಜ್ಯಮುಗ್ಧ ಜನರ ಹೆಣಗಳ ಮೇಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ :...

ಮುಗ್ಧ ಜನರ ಹೆಣಗಳ ಮೇಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ : ಸಿಎಂ ಸಿದ್ದರಾಮಯ್ಯ

ಬಳ್ಳಾರಿ : ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ ಮತ್ತು ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ ಎಂದು ಬಳ್ಳಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದರು.

ಬಳ್ಳಾರಿಯ ಸಂಡೂರಿನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಡಿ ಕುನ್ಹಾ ಅವರ ತನಿಖಾ ಆಯೋಗ ಶಿಫಾರಸು ಮಾಡಿದೆ.

ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ಮುಗ್ಧ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ನಾಯಕರನ್ನು ಯಾವ ದೇವರೂ ಕ್ಷಮಿಸಲ್ಲ, ನೀವೂ ಕ್ಷಮಿಸಬೇಡಿ ಎಂದರು.

ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ.ಆಗ ಇಂದಿರಾಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ.

ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗಲು ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಇದೆ ವೇಳೆ ತಿಳಿಸಿದರು.

ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ.

ಹಿಂದೆ ಜನಾರ್ದನರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ. ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿ ಅಭಿವೃದ್ಧಿಗೆ ನಿಮ್ಮ ಬೆಂಬಲ ನೀಡಿ ಎಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular