Saturday, April 5, 2025
Google search engine

HomeUncategorizedರಾಷ್ಟ್ರೀಯಅವಿವಾಹಿತ ಜೋಡಿಗೆ ಹೋಟೆಲ್‌ ರೂಮ್‌ ಇಲ್ಲ- ಓಯೋ ಹೊಸ ನಿಯಮ

ಅವಿವಾಹಿತ ಜೋಡಿಗೆ ಹೋಟೆಲ್‌ ರೂಮ್‌ ಇಲ್ಲ- ಓಯೋ ಹೊಸ ನಿಯಮ

ನವದೆಹಲಿ: ಓಯೋ ಹೋಟೆಲ್‌ ಬುಕ್ಕಿಂಗ್‌ ಕಂಪನಿ ಚೆಕ್‌ ಇನ್‌ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ಅದರಂತೆ ಇನ್ಮುಂದೆ ಅವಿವಾಹಿತ ಪುರುಷ – ಮಹಿಳಾ ಜೋಡಿಗೆ ಹೋಟೆಲ್‌ಗಳಲ್ಲಿ ಅನುಮತಿ ಇರುವುದಿಲ್ಲ ಎಂದು ಹೇಳಿದೆ.

ಹೌದು. ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್‌ ಬುಕ್ಕಿಂಗ್‌ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ಗಳು ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್‌ ಚೆಕ್‌ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್‌ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ.

ಮೀರತ್‌ನಲ್ಲಿ ಜಾರಿ: ಓಯೋನ ಈ ಹೊಸ ನಿಯಮವು ಮೀರತ್‌ನಲ್ಲಿ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ನಗರಗಳಲ್ಲಿಯೂ ಜಾರಿಗೆ ತರಲಿದೆ. ಓಯೋ ನಾಗರಿಕ ಸಮಾಜದ ಹಲವು ಗುಂಪುಗಳಿಂದ ಪ್ರತಿಕ್ರಿಯೆಯನ್ನು ಸ್ವೀಕರಿಸಲಾಗಿದೆ. ಹಲವು ದೂರುಗಳು ಜನಸಾಮಾನ್ಯರಿಂದ ಬಂದಿವೆ. ಹಲವು ನಗರಗಳ ನಿವಾಸಿಗಳು ಅವಿವಾಹಿತರಿಗೆ ಚೆಕ್-ಇನ್ ಮಾಡಲು ಅವಕಾಶ ನೀಡದಂತೆ ಅರ್ಜಿ ಸಲ್ಲಿಸಿದ್ದರು. ಹೀಗೆ ಹಲವು ವಿಚಾರವಾಗಿ ದೂರು ಸ್ವೀಕರಿಸಿದ್ದ ಓಯೋ ಹೊಸ ನಿಯಮ ಜಾರಿಗೆ ತಂದಿದೆ ಎನ್ನಲಾಗಿದೆ.

ಐಡಿ ಪ್ರೂಫ್‌ ಕಡ್ಡಾಯ

ಹೊಸ ನಿಯಮದ ಪ್ರಕಾರ, ಹೊಟೇಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ಸಂಬಂಧದ ದಾಖಲೆ ತರುವುದು ಕಡ್ಡಾಯವಾಗಿದೆ. ಆನ್‌ಲೈನ್ ಬುಕ್ಕಿಂಗ್‌ಗೂ ಕೂಡಾ ಇದು ಕಡ್ಡಾಯವಾಗಿದೆ. ಬೇರೆ ನಗರಗಳಿಗೂ ಇದೆ ನಿಯಮ ವಿಸ್ತರಿಸುವ ಬಗ್ಗೆ ಯೋಚನೆ ಮಾಡಲಾಗುವುದು.

ಒಟ್ಟಾರೆ ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಪದ್ಧತಿಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ ಎಂದು ಓಯೋ ಉತ್ತರ ಭಾರತ ಪ್ರಾದೇಶಿಕ ಮುಖ್ಯಸ್ಥ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular