ಮೈಸೂರು : ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂಬ ಹೆಸರಿಡಬೇಕು ಎಂದು ಪ್ರಸ್ತಾಪಿಸಿದ್ದೇ ನಾನು. ಎಷ್ಟೇ ವಿರೋಧ ಬಂದರೂ ನೂರಕ್ಕೆ ನೂರು ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರನ್ನು ಇಡುತ್ತೇವೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದರು.
ಮೈಸೂರಿನ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರವಾಗಿ ನಡೆಯುತ್ತಿರುವ ಜಟಾಪಟಿಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ನಾನೇ ಮೊದಲು ವಿಷಯ ಪ್ರಸ್ತಾಪಿಸಿದ್ದೆ. ಮನಸ್ಸು ಶುದ್ಧ ಇಲ್ಲದವರು, ಹೊಟ್ಟೆ ಕಿಚ್ಚಿನಿಂದ ಸಿದ್ದರಾಮಯ್ಯನವರ ಹೆಸರು ವಿರೋಧಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಜರ ನಂತರ ಮೈಸೂರಿಗೆ ಅತಿ ಹೆಚ್ಚು ಕೊಡುಗೆ ಕೊಟ್ಟವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಶಾಲಾ ಕಾಲೇಜು ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಸಿದ್ದರಾಮಯ್ಯ ಕೊಡುಗೆ ಬಹಳ ದೊಡ್ಡದು. ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದು ಖುಷಿಯಾಯಿತು. ಅವರು ಚೆನ್ನಾಗಿ ಸಿದ್ದರಾಮಯ್ಯ ಅವರ ಸಾಧನೆ ವಿವರಿಸಿzರೆ. ಮನಸ್ಸು ಶುದ್ಧ ಇಲ್ಲದವರು ಮಾತ್ರ ಸಿದ್ದರಾಮಯ್ಯ ಹೆಸರು ವಿರೋಧಿಸುತ್ತಾರೆ. ಮಹಾತ್ಮ ಗಾಂಧಿ ಮೇಲೂ ಆರೋಪ ಮಾಡುತ್ತಾರೆ.