Monday, April 21, 2025
Google search engine

Homeರಾಜ್ಯಬಿಜೆಪಿ ಏನೇ ಮಾಡಿದರು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲ್ಲ : ಸುರ್ಜೆವಾಲ

ಬಿಜೆಪಿ ಏನೇ ಮಾಡಿದರು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲ್ಲ : ಸುರ್ಜೆವಾಲ

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಷಯಗಳನ್ನು ಚರ್ಚಿಸಿದರು. ಈ ಸಭೆ ಬಳಿಕ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಗ್ಯಾರೆಂಟಿಗಳನ್ನು ನೀಡುತ್ತಿರುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ ಹಾಗಾಗಿ ಈ ರೀತಿ ಬಿಜೆಪಿ ದಾಳಿ ಮಾಡುತ್ತಿದೆ ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜ್ಯಪಾಲರು ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೀಡುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ. ಕಳೆದ ಒಂದು ವರ್ಷದಿಂದ ಗ್ಯಾರಂಟಿಗಳ ಮೇಲೆ ದಾಳಿ ನಡೆಯುತ್ತಿದೆ.

ಎಸ್ ಸಿ ಎಸ್ ಟಿ ಒ ಬಿ ಸಿ ಸಮುದಾಯಕ್ಕೆ ಗ್ಯಾರಂಟಿ ನೀಡುವುದನ್ನು ಬಿಜೆಪಿಗರು ಸಹಿಸುತ್ತಿಲ್ಲ.ಇದು ಸಿಎಂ ಡಿಸಿಎಂ ಮೇಲಿನ ದಾಳಿಯಲ್ಲ. ಗ್ಯಾರಂಟಿಗಳ ಮೇಲಿನ ದಾಳಿ. ಕೇಂದ್ರ ಅಥವಾ ಬಿಜೆಪಿ ಏನೇ ಮಾಡಿದರು ಗ್ಯಾರಂಟಿ ನಿಲ್ಲಿಸಲ್ಲ ಮುಂದುವರಿಸುತ್ತೇವೆ. ಜನತಾ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಸರ್ಕಾರದ ಬಗ್ಗೆ ರಾಜ್ಯಪಾಲರ ನಡೆ ವಿರುದ್ಧ ಹೋರಾಟಕ್ಕೆ ಕರೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ನಾಯಕ್ರು ಕರೆ ನೀಡಿದ್ದಾರೆ. ದೆಹಲಿಯಲ್ಲಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೋರಾಟಕ್ಕೆ ಕರೆ ನೀಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕರು ಕಾರ್ಯಕರ್ತರ ವಿರುದ್ಧ ಕುತಂತ್ರ ನಡೆಯುತ್ತಿದೆ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತೇವೆ. ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ನಿಲ್ಲುತ್ತೇವೆ.ಹಿಂದುಳಿದ ಸಮುದಾಯದ ನಾಯಕನೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರ ಮೇಲೆ ದಾಳಿ ನಡೆಯುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

RELATED ARTICLES
- Advertisment -
Google search engine

Most Popular