ಮಂಡ್ಯ : ನಟ ದರ್ಶನ್ ಪ್ರಕರಣದಲ್ಲಿ ಯಾವ ಮಂತ್ರಿಯೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿಗಳು ಯಾವ ಒತ್ತಡಕ್ಕೂ ಮಣಿಯುವುದಿಲ್ಲ. ಕಲಾವಿದ ಅಂದ್ಮೇಲೆ ಎಲ್ಲರ ಜೊತೆಗೂ ಒಳ್ಳೆಯ ಸ್ನೇಹ, ಪರಿಚಯ ಇರುತ್ತದೆ. ಆದರೆ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂದು ಹೇಳಿದ್ದಾರೆ.
ಉದ್ದೇಶಪೂರ್ವಕವೋ ಅಥವಾ ಆಕಸ್ಮಿಕವೋ ನನಗೆ ಗೊತ್ತಿಲ್ಲ. ಈ ಪ್ರಕರಣದ ಬಗ್ಗೆ ನ್ಯಾಯಾಲಯ ತೀರ್ಮಾನಿಸುತ್ತದೆ. ಪ್ರಕರಣ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.