Sunday, April 20, 2025
Google search engine

HomeUncategorizedರಾಷ್ಟ್ರೀಯದಲಿತ ಸಮಾವೇಶ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ : ಸಚಿವ ಕೆ.ಎನ್ ರಾಜಣ್ಣ

ದಲಿತ ಸಮಾವೇಶ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ : ಸಚಿವ ಕೆ.ಎನ್ ರಾಜಣ್ಣ

ನವದೆಹಲಿ : ದಲಿತ ಸಮುದಾಯದ ಸಿಎಂ ಸ್ಥಾನ ಕೇಳಿದರೆ ತಪ್ಪೇನು? ದಲಿತ ಸಿಎಂ ಕೂಗಿದರೆ ಹೈಕಮಾಂಡ್ ತೀರ್ಮಾನ ಮಾಡೇ ಮಾಡುತ್ತದೆ. ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನವನ್ನು ಕೇಳಬಹುದು. ‘ದಲಿತ ಸಮಾವೇಶ’ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

ನವದೆಹಲಿಯಲ್ಲಿ ದಲಿತ ಸಚಿವರಿಂದ ಪ್ರತ್ಯೇಕ ಸಮಾವೇಶ ಮಾಡುವ ಕುರಿತಾಗಿ ಮಾತನಾಡಿದ ಅವರು, ಸಮಾವೇಶದ ಅಗತ್ಯವನ್ನು ನಾಯಕರ ಗಮನಕ್ಕೆ ತಂದಿದ್ದೇವೆ. ನಾನು ಎಸ್ ಟಿ ಸಮುದಾಯದ ಮತಗಳಿಂದ ಮಾತ್ರ ಗೆದ್ದಿಲ್ಲ. ಎಲ್ಲಾ ಸಮುದಾಯದ ಆಶೀರ್ವಾದ ಬೇಕು. ಕಾಂಗ್ರೆಸ್ಗೆ ಯಾವ ಸಮಾವೇಶ ಮಾಡಿದರೆ ಒಳ್ಳೆಯದೊ ಆ ಸಮಾವೇಶ ಮಾಡಬೇಕು ಎಂದು ತಿಳಿಸಿದರು.

ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಜಾಗೃತಿ ಮೂಡಿಸಬೇಕಿದೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ. ಸಮಾವೇಶದ ಅಗತ್ಯವನ್ನು ಕೇಂದ್ರ ನಾಯಕರಿಗೆ ಗಮನಕ್ಕೆ ತಂದಿದ್ದೇವೆ. ಕೇಂದ್ರದ ನಾಯಕರನ್ನು ಸಮಾವೇಶಕ್ಕೆ ಕರಿಸುತ್ತೇವೆ. ಮುಂದಿನ ದಿನಗಳಲ್ಲಿ ಸಮಾವೇಶಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ಮಾಡುತ್ತೇವೆ. ಚಿತ್ರದುರ್ಗ ದಾವಣಗೆರೆ ಅಥವಾ ಹುಬ್ಬಳ್ಳಿಯಲ್ಲಿ ಸಮಾವೇಶ ಮಾಡುತ್ತೇವೆ ಎಂದು ಹೇಳಿದರು.

ಪಕ್ಷ ಗಟ್ಟಿ ಆದರೆ ಸಿದ್ದರಾಮಯ್ಯನವರು ಇರುತ್ತಾರೆ. ಎಲ್ಲರಿಗೂ ಕೇಳುವ ಹಕ್ಕಿದೆ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದೇ ಶಿಸ್ತು. ಸಮಾವೇಶ ಮಾಡಲು ಕೆಪಿಸಿಸಿ ಅಧ್ಯಕ್ಷರನ್ನು ಕೇಳಬೇಕಿಲ್ಲ ಎಐಸಿಸಿ ಅಧ್ಯಕ್ಷರು ದೊಡ್ಡವರೋ? ಕೆಪಿಸಿಸಿ ಅಧ್ಯಕ್ಷರು ದೊಡ್ಡವರೋ? ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಸಮಾವೇಶ ಮಾಡಲಾಗುತ್ತದೆ. ಹಾಸನದಲ್ಲೂ ಪಕ್ಷದ ವೇದಿಕೆಯಲ್ಲಿ ಸಮಾವೇಶ ಮಾಡುತ್ತೇವೆ ಎಂದು ದೆಹಲಿಯಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.

RELATED ARTICLES
- Advertisment -
Google search engine

Most Popular