Saturday, April 19, 2025
Google search engine

Homeರಾಜ್ಯರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವುದು ನಿಜ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ನಿರಂತರ ನಿಗಾ ವಹಿಸುತ್ತಿದ್ದು ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬೆಡ್ ಅಥವಾ ಔಷಧ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿ ತಿಳಿಸಿದೆ ಎಂದರು.

೨ ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಜಾಗೃತಿ ಮೂ ಡಿಸುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ ಎಂದರು. ಹೆಚ್ಚು ಡೆಂಗ್ಯೂ ಪ್ರಕರಣ ಕಂಡುಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular