Saturday, April 19, 2025
Google search engine

Homeರಾಜ್ಯHMPV ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್

HMPV ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್

ಬೆಂಗಳೂರು: ಬೆಂಗಳೂರಿನಲ್ಲಿ HMPV ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, HMPV ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.

ಆರೋಗ್ಯಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್​​ಎಂಪಿ ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಮ್ಯೂಟೆಟ್​ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್​​ಎಂಪಿ ವೈರಸ್​ ರೀತಿ ನೂರಾರು ವೈರಸ್​ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್​ ಆಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ 2 ಲಕ್ಷ 36 ಸಾವಿರ ಐಎಲ್ಐ ಕೇಸ್​ಗಳಿವೆ. ಐಎಲ್ಐ ಕೇಸ್​ನಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಪುದುಚೆರಿ, ಗುಜರಾತ್​ನಲ್ಲಿ ಹೆಚ್ಎಂಪಿ ವೈರಸ್ ಪ್ರಕರಣವಿದೆ. ಕೇಂದ್ರ ಸರ್ಕಾರದ ಮಾಹಿತಿ ಅನ್ವಯ ಐಎಲ್​​ಐ ಕೇಸ್ ಹೆಚ್ಚಾಗಿಲ್ಲ. ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. ರಾಜ್ಯ ಆರೋಗ್ಯ ಇಲಾಖೆಯಲ್ಲಿ ಹಣಕಾಸಿನ ಕೊರತೆಯಿಲ್ಲ. ವೈದ್ಯಕೀಯ ಪರಿಕರ ಖರೀದಿ ಸಹಜವಾಗಿಯೇ ನಡೆಯುತ್ತಿದೆ. ಆಯಾ ಆಸ್ಪತ್ರೆಗಳಿಂದಲೇ ವೈದ್ಯಕೀಯ ಸಾಮಗ್ರಿ ಖರೀದಿ ಮಾಡಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರ ಐಸಿಎಂಆರ್ ಸರ್ವಲೆನ್ಸ್ ಮಾಡುತ್ತಿದೆ. ಐಸಿಎಂಆರ್ ಪ್ರಕಾರ ಶೇ 1ರಷ್ಟು ಹೆಚ್​​​​ಎಂಪಿವಿ ಬರುತ್ತದೆ. ಈ ವೈರಸ್​​ನಿಂದ ಮರಣ ಪ್ರಮಾಣ ಕಡಿಮೆ. ಬಂದ ಬಳಿಕ ಗುಣಮುಖರಾಗುತ್ತಾರೆ. ಹೆಚ್​​​​ಎಂಪಿವಿ ಬಂದ ಎರಡು ಮಕ್ಕಳು ಗುಣಮುಖರಾಗಿದ್ದಾರೆ. ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ. ಎಚ್ಚರಿಕೆಯಿಂದ ಇರಬೇಕು ಅಷ್ಟೇ. ಈಗಾಗಲೇ ನಾವು ಕೂಡ ಮಾರ್ಗಸೂಚಿ ಹೇಳಿದ್ದೇವೆ. ಏನು ಮಾಡಬೇಕು, ಏನು ಮಾಡಬಾರದು ಅಂತಾ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular