Sunday, August 17, 2025
Google search engine

Homeರಾಜಕೀಯಎಸ್‌ಐಟಿ ತನಿಖೆಗೆ ಆಕ್ಷೇಪವಿಲ್ಲ, ಆದರೆ ಅಪಪ್ರಚಾರ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ

ಎಸ್‌ಐಟಿ ತನಿಖೆಗೆ ಆಕ್ಷೇಪವಿಲ್ಲ, ಆದರೆ ಅಪಪ್ರಚಾರ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ

ಮಂಗಳೂರು(ದಕ್ಷಿಣ ಕನ್ನಡ): ನಮಗೆ ಎಸ್.ಐ.ಟಿ ತನಿಖೆಯ ಬಗ್ಗೆ ಆಕ್ಷೇಪವಿಲ್ಲ. ಆದ್ರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅವರು ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಸ್.ಐ.ಟಿ ರಚನೆಯಾದಗಲೇ ಅದನ್ನು ಸ್ವಾಗತಿಸಿದ್ದೇವೆ ಎಂದ ಅವರು, ಕ್ಷೇತ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರಗಳನ್ನು ಸಹಿಸಲು ಸಾಧ್ಯವಿಲ್ಲ. ಡಿ.ಕೆ ಶಿವಕುಮಾರ್ ಅವರೇ ಈ ಬಗ್ಗೆ ಹೇಳಿದ್ದಾರೆ ಆದರೆ ಅಂತಹ ಶಕ್ತಿಗಳ ವಿರುದ್ದ ಕ್ರಮಕ್ಕ ಸರಕಾರ ಯಾಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ವೇಳೆ ಬಿಜೆಪಿ ನಾಯಕರಾದ ಸಿ.ಟಿ ರವಿ, ಚಲವಾದಿ ನರಾಯಣ ಸ್ವಾಮಿ, ಸಂಸದ ಬ್ರಿಜೇಶ್ ಚೌಟ, ಶಾಸಕರುಗಳಾದ ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಭಗೀರಥಿ ಮುರುಳ್ಯ, ಉಮಾಥ ಕೋಟ್ಯಾನ್, ಭರತ್ ಶೆಟ್ಟಿ, ಪ್ರತಾಪ ಸಿಂಹ ನಯಕ್, ಯಶ್ ಪಾಲ್ ಸುವರ್ಣ ಹಾಗೂ ಇತರರು ಇದ್ದರು.

ಬಳಿಕ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ ಡಿ ವೀರದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

RELATED ARTICLES
- Advertisment -
Google search engine

Most Popular