ಬಳ್ಳಾರಿ : ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ಸಾವನ್ನಪ್ಪಿಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ವೇಳೆ ಬಳ್ಳಾರಿ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು ಎನ್ನಲಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಬಳ್ಳಾರಿ ಜಿಲ್ಲಾಧಿಕಾರಿಗಳು ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಯಾವುದೇ ಮಹಿಳೆ ಸಾವನ್ನಪ್ಪಿಲ್ಲ ಎಂದು ತಿಳಿಸಿದ್ದಾರೆ.
ಭೀಕರ ಕಾಲ್ತುಳಿತದಲ್ಲಿ ಕೇರಳ ಮೂಲದ ಮಹಿಳೆ ನಿರ್ಮಲಾ (50) ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಉಳಿದಂತೆ ಆಂಧ್ರಪ್ರದೇಶದ ನರಸೀಪಟ್ಟಣದ ಬಿ.ನಾಯ್ಡು ಬಾಬು (51), ರಜಿನಿ (47), ಲಾವಣ್ಯ (40), ವಿಶಾಖಪಟ್ಟಣದ ಶಾಂತಿ (34) ಮತ್ತು ತಮಿಳುನಾಡಿನ ಸೇಲಂ ಪ್ರದೇಶದ ಮಲ್ಲಿಗಾ (49) ಶವವಾಗಿ ಪತ್ತೆಯಾಗಿದ್ದಾರೆ. . ಇನ್ನೂ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರುಯು ಆಸ್ಪತ್ರೆಗೆ ಕರೆದೊಯ್ಯಲಾಯಿತು.