Thursday, April 10, 2025
Google search engine

Homeಅಪರಾಧಜೈಲಿನ ಬಳಿ ಯಾರೂ ಬರಬೇಡಿ: ಅಭಿಮಾನಿಗಳಲ್ಲಿ ನಟ ದರ್ಶನ್‌ ಮನವಿ

ಜೈಲಿನ ಬಳಿ ಯಾರೂ ಬರಬೇಡಿ: ಅಭಿಮಾನಿಗಳಲ್ಲಿ ನಟ ದರ್ಶನ್‌ ಮನವಿ

ಬೆಂಗಳೂರು: ಯಾರು ಕೂಡ ಜೈಲಿನ ಬಳಿ ಬರಬೇಡಿ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ , ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಜೈಲಿನಿಂದಲೇ ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. ‘ಅಭಿಮಾನಿಗಳು ಯಾರೂ ಜೈಲಿಗೆ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಯಾರು ಕೂಡ ಜೈಲಿನ ಬಳಿ ಬರಬೇಡಿ’ ಎಂದು ದರ್ಶನ್‌ ಕೇಳಿಕೊಂಡಿದ್ದಾರೆ.

ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ. ಅದರಲ್ಲೂ ನಿನ್ನೆ ವಿಶೇಷಚೇತನ ಯುವತಿ ಸೌಮ್ಯಾ ಭೇಟಿಗೆ ಆಗಮಿಸಿದ್ದ ಬಗ್ಗೆ ಬೇಸರವಿದೆ ಎಂದು ತಿಳಿಸಿದ್ದಾರೆ.

ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಸೌಮ್ಯಾ ಹಠ ಮಾಡಿದ್ದರು. ಅನ್ನ, ಆಹಾರ ಸೇವಿಸದೇ ಹಠ ಹಿಡಿದಿದ್ದರು. ನಟ ದರ್ಶನ್ ‌ಕೊಡಿಸಿದ್ದ ಆಟೋದಲ್ಲಿ ಪೋಷಕರ ಜೊತೆ ಆಗಮಿಸಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಪರಪ್ಪನ ಅಗ್ರಹಾರದಲ್ಲಿ ಅವರನ್ನು ಇರಿಸಲಾಗಿದೆ. ನಟ ದರ್ಶನ್‌ ಸೆರೆವಾಸ 7ನೇ ದಿನಕ್ಕೆ ಕಾಲಿಟ್ಟಿದೆ.

RELATED ARTICLES
- Advertisment -
Google search engine

Most Popular