Friday, April 11, 2025
Google search engine

Homeರಾಜ್ಯಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ, ಆಗಸ್ಟ್ 27ರಂದೇ ಎಕ್ಸಾಂ: ಸರ್ಕಾರ ಸ್ಪಷ್ಟನೆ

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ, ಆಗಸ್ಟ್ 27ರಂದೇ ಎಕ್ಸಾಂ: ಸರ್ಕಾರ ಸ್ಪಷ್ಟನೆ

ಬೆಂಗಳೂರು: ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ(ಆಗಸ್ಟ್ 27) ಪರೀಕ್ಷೆ ನಡೆಸುವುದಾಗಿ ಹೇಳಿದೆ.

ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು, ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಕೆಪಿಎಸ್‌ಸಿ, ಡಿಪಿಎಆರ್‌ ಮತ್ತು ಸಿಎಂಒನ ಎಲ್ಲಾ ಪ್ರಮುಖ ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದಾರೆ. ವಾಟ್ಸಾಪ್ ಸಂದೇಶಗಳ ಸುರಿಮಳೆ ಸುರಿಸುತ್ತಿದ್ದಾರೆ. ಎಷ್ಟರಮಟ್ಟಿಗೆ ಎಂದರೆ ಕೆಲವೊಮ್ಮೆ ನನ್ನ ಫೋನ್ ಅನ್ನು ನಾನು ಏರೋಪ್ಲೇನ್ ಮೋಡ್‌ನಲ್ಲಿ ಇಡಬೇಕಾದ ಪರಿಸ್ಥಿತಿ ಬಂದೊದಗಿದೆ. ಕೆಪಿಎಸ್‌ಸಿ ಸುತ್ತ ಅನುಮಾನಗಳ ಹುತ್ತ ಎಂಬಂತಹ ಪದಗಳನ್ನು ಬಳಸಿ ಸಾಕಷ್ಟು ತಪ್ಪು ಮಾಹಿತಿ ಹರಡಿ ಹಗರಣ ನಡೆದಿದೆ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ.

ಕೆಪಿಎಸ್‌ಸಿ ಅಥವಾ ಸರ್ಕಾರವು ನೀಡಿರುವ ಹೆಚ್ಚುವರಿ ಅವಕಾಶ ಮತ್ತು ವಯೋಮಿತಿ ಸಡಿಲಿಕೆಯನ್ನು ಪಡೆದ ಸುಮಾರು ಈ 1500 ವಿದ್ಯಾರ್ಥಿಗಳ (ವಯೋಮಿತಿ ಸಡಿಲಿಕೆ ನೀಡಿದ ನಂತರ ತಡವಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ) ಈ ಲಾಬಿಗೆ ಮಣಿದರೆ ಸುಮಾರು 2.5 ಲಕ್ಷಕ್ಕೂ ಹೆಚ್ಚು ಅರ್ಜಿದಾರರು ಸಂಕಷ್ಟಕ್ಕೆ ಸಿಲುಕುತ್ತಾರೆ ಅವರು ಅನ್ಯಾಯವನ್ನು ಎದುರಿಸಬೇಕಾಗುತ್ತದೆ. ಏಕೆಂದರೆ, ಈ 2.5 ಲಕ್ಷ ಅಭ್ಯರ್ಥಿಗಳು ಪೂರ್ಣ ಸಿದ್ಧತೆ ನಡೆಸಿದ್ದಾರೆ, ಪರೀಕ್ಷಾ ಕೇಂದ್ರಗಳಿಗೆ ಬರಲು ತಮ್ಮ ಪ್ರಯಾಣದ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದಾರೆ. ವಯೋಮಿತಿ ಸಡಿಲಿಕೆಯಿಂದಾಗಿ ಹೆಚ್ಚುವರಿ ಅವಕಾಶ ಪಡೆದಿರುವವರು ಪರೀಕ್ಷೆ ಮುಂದೂಡಿಕೆಯಾದರೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆಂದು ತಿಳಿಸಿದ್ದಾರೆ.

ಮುಂದಿನ ಎರಡು ತಿಂಗಳ ಅವಧಿಯಲ್ಲಿ ಭಾನುವಾರಗಳಂದು ಬಿಡುವಿಲ್ಲದ ಕಾರಣ ವಾರದ ಕೆಲಸದ ದಿನವೇ ಪರೀಕ್ಷೆ ನಡೆಸಲಾಗುತ್ತಿದೆ. ಎರಡೂವರೆ ಲಕ್ಷ ವಿದ್ಯಾರ್ಥಿಗಳು ಇದಕ್ಕೆ ತಯರಾಗಿದ್ದಾರೆ. ಕಾಗದಪತ್ರಗಳ ಮುದ್ರಣಕ್ಕೆ ನಾಲ್ಕರಿಂದ 5 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಸುದೀರ್ಘ ಕಾಲದವರೆಗೂ ಮುದ್ರಿತ ದಸ್ತವೇಜುಗಳನ್ನು ರಕ್ಷಿಸುವುದು ಸೂಕ್ತವಲ್ಲ. ಪ್ರಶ್ನೆಪತ್ರಿಕೆ ಬಹಿರಂಗದಂತಹ ಅಪಾಯಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ವಾರದ ರಜಾ ದಿನವೇ ಪರೀಕ್ಷೆ ನಡೆಸುತ್ತಿರುವುದಾಗಿ ತಿಳಿಸಿದರು.

RELATED ARTICLES
- Advertisment -
Google search engine

Most Popular