ಬೆಂಗಳೂರು : ರಾಜ್ಯದಲ್ಲಿ ಮೂರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತೆರೆ ಎಳೆದಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಡಿಸಿಎಂ ಸೃಷ್ಠಿ ವಿಷಯ ಸಿನಿಮೀಯ ರೀತಿಯಲ್ಲಿ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆಗೆ ನಾವು ತಯಾರಿ ನಡೆಸುತ್ತಿದ್ದೇವೆ. ಮೂರು ಡಿಸಿಎಂ ಹುದ್ದೆ ಸೃಷ್ಠಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗಿದೆ. ರಾಜ್ಯ, ಜಿಲ್ಲಾ, ತಾಲೂಕು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಿನ್ನೆಲೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.