ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಇಂದು ಶನಿವಾರ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.