ಕಲಬುರಗಿ : ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಪರಿಷ್ಕರಣೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಪರಿಷ್ಕರಣೆ ಮಾಡುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಬದಲಾವಣೆ ಮಾಡುವ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ. ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು ಎಂದು ಹೇಳಿದ್ದಾರೆ. ನಕಲಿ ರೇಷನ್ ಕಾರ್ಡ್ ರದ್ಧತಿ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.