Friday, April 4, 2025
Google search engine

Homeರಾಜ್ಯತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ, ಆಂಧ್ರ ಸರ್ಕಾರದ ಜೊತೆ ಚರ್ಚೆ : ಸಿಎಂ ಸಿದ್ದರಾಮಯ್ಯ

ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ, ಆಂಧ್ರ ಸರ್ಕಾರದ ಜೊತೆ ಚರ್ಚೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ಇಂದು ಶಕ್ತಿಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಅವರ ಜೊತೆ ನಾನೇ ಮಾತನಾಡಿದ್ದೇನೆ. ಆದರೆ ಅವರು ಅಕ್ಕಿ ದಾಸ್ತಾನು ಇಲ್ಲವೆಂದಿದ್ದಾರೆ. ಹೀಗಾಗಿ ಆಂಧ್ರ ಸರ್ಕಾರದ ಜೊತೆ ಚರ್ಚಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇನೆ ಎಂದರು.

ಛತ್ತೀಸ್ ಘಢದವರು 1.5 ಲಕ್ಷ ಟನ್ ಅಕ್ಕಿ ಕೊಡಲು ಸಮ್ಮತಿಸಿದ್ದಾರೆ. ಆದರೆ ದರ ಸ್ವಲ್ಪ ದುಬಾರಿ ಆಗುತ್ತಿದೆ ಮತ್ತು ಸಾಗಣೆ ವೆಚ್ಚವೂ ಹೆಚ್ಚಾಗಲಿದೆ. ಇಂದು ಸಂಜೆ ಮತ್ತೊಮ್ಮೆ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಸಭೆ ಮಾಡಿದ ನಂತರ, ಛತ್ತೀಸ್ ಘಡದಿಂದ ಅಕ್ಕಿ ಖರೀದಿ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್ ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ದೂರವಾಣಿ ಮೂಲಕ ಅಕ್ಕಿಯ ದರ ಹಾಗೂ ಎಕ್ಸಸ್, ಟ್ರಾನ್ಸ್ ಪೋರ್ಟ್ ಚಾರ್ಜ್ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular