Thursday, April 3, 2025
Google search engine

HomeUncategorizedರಾಷ್ಟ್ರೀಯಸೆ.30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ: ಯುಪಿ ಸರ್ಕಾರ ಆದೇಶ

ಸೆ.30ರೊಳಗೆ ಆಸ್ತಿ ಘೋಷಿಸದಿದ್ದರೆ ಸಂಬಳವಿಲ್ಲ: ಯುಪಿ ಸರ್ಕಾರ ಆದೇಶ

ಉತ್ತರ ಪ್ರದೇಶ: ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರವು ತನ್ನ ಉದ್ಯೋಗಿಗಳಿಗೆ ಸೆಪ್ಟೆಂಬರ್ ೩೦ರೊಳಗೆ ತಮ್ಮ ಚರ ಹಾಗೂ ಸ್ಥಿರ ಆಸ್ತಿಗಳನ್ನು ಬಹಿರಂಗಪಡಿಸದಿದ್ದರೆ ಸಂಬಳ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಹೊರಡಿಸಿದ ಆದೇಶದಲ್ಲಿ, ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಇಲಾಖೆಗಳ ಮುಖ್ಯಸ್ಥರು ತಮ್ಮ ಆಸ್ತಿ ವಿವರಗಳನ್ನು ಮಾನವ್ ಸಂಪದ ಪೋರ್ಟಲ್‌ನಲ್ಲಿ ಸೆಪ್ಟೆಂಬರ್ ೩೦ ರೊಳಗೆ ಘೋಷಿಸಬೇಕು.

ಆದೇಶವನ್ನು ಪಾಲಿಸುತ್ತಿರುವ ನೌಕರರನ್ನು ಸಕಾಲದಲ್ಲಿ ಪರಿಶೀಲಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಡ್ರಾಯಿಂಗ್ ಮತ್ತು ಡಿಸ್ಬರ್ಸಿಂಗ್ ಅಧಿಕಾರಿ (ಡಿಡಿಒ) ಅವರಿಗೆ ವಹಿಸಿದೆ. ಪೋರ್ಟಲ್‌ನಲ್ಲಿ ತಮ್ಮ ಆಸ್ತಿ ವಿವರಗಳನ್ನು ಒದಗಿಸುವ ಉದ್ಯೋಗಿಗಳಿಗೆ ಮಾತ್ರ ಸೆಪ್ಟೆಂಬರ್ ಸಂಬಳವನ್ನು ನೀಡಲಾಗುತ್ತದೆ. ಕೆಲವು ನೌಕರರು ಹೆಚ್ಚಿನ ಸಮಯ ಕೋರಿದ ನಂತರ ರಾಜ್ಯ ಸರ್ಕಾರ ಸೆಪ್ಟೆಂಬರ್ ೩೦ ರವರೆಗೆ ಗಡುವನ್ನು ವಿಸ್ತರಿಸಿತು.

RELATED ARTICLES
- Advertisment -
Google search engine

Most Popular