ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಯುತ್ತಿರುವ ನಡುವೆ, “ತನಿಖೆ ಮುಗಿಯುವವರೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಧರ್ಮಸ್ಥಳದ ಹೆಸರಿಗೆ ಧಕ್ಕೆಯಾಗದಂತೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಲವು ಶಾಸಕರು ಸಹ ಇದಕ್ಕೆ ದನಿಗೂಡಿಸಿದ್ದಾರೆ.
ಈ ಕುರಿತು ಮಾತನಾಡಿದ ಪರಮೇಶ್ವರ್, “ಎಸ್ಐಟಿ ತನಿಖೆ ಪೂರ್ಣವಾಗದವರೆಗೆ ಮಾತು ಮಾತನಾಡುವುದು ಸರಿ ಅಲ್ಲ. ವಾಸ್ತವಾಂಶ ತಿಳಿಯುವುದು ತನಿಖೆಯ ಬಳಿಕವೇ ಸಾಧ್ಯ” ಎಂದರು.
ಮೂಲತಃ 13 ಸ್ಥಳ ಗುರುತಿಸಲಾಗಿದ್ದು, ಈಗ 16ರಿಂದ 19 ಸ್ಥಳಗಳ ತನಿಖೆ ನಡೆಯುತ್ತಿದೆ. ಈ ವಿಚಾರ ವಿಧಾನಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಅಲ್ಲಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದೂ ಅವರು ಹೇಳಿದರು.